ಬೆಳಗಾವಿ: ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ಪರೀಕ್ಷೆಗಳನ್ನು ಮುಂದೂಡಲಾಗಿಲ್ಲ. ಮೊದಲನೇ ಸೆಮಿಸ್ಟರ್ ಪರೀಕ್ಷೆಗಳು ಏ.19ರಿಂದ ನಿಗದಿತ ವೇಳಾಪಟ್ಟಿ ಪ್ರಕಾರವೇ ನಡೆಯಲಿವೆ. ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡುವಂತೆ ಆಯಾ ಕಾಲೇಜುಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಕುಲಸಚಿವ ಪ್ರೊ.ಬಿ.ಈ. ರಂಗಸ್ವಾಮಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.