ADVERTISEMENT

ನೀರಿನ ಸಮಸ್ಯೆ: ಸಿದ್ಧತೆ ಕೈಗೊಳ್ಳಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಮಹೇಶ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 17:24 IST
Last Updated 5 ಡಿಸೆಂಬರ್ 2018, 17:24 IST
ಅಥಣಿ ತಾಲ್ಲೂಕು ಪಂಚಾಯ್ತಿಯಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿದರು 
ಅಥಣಿ ತಾಲ್ಲೂಕು ಪಂಚಾಯ್ತಿಯಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿದರು    

ಅಥಣಿ: ಬೇಸಿಗೆಕಾಲದಲ್ಲಿಕುಡಿಯುವ ನೀರಿನ ಸಮಸ್ಯೆಯಾಗದಂತೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಶಾಸಕ ಮಹೇಶ ಕುಮಠಳ್ಳಿ ಸೂಚನೆ ನೀಡಿದರು.

ತಾಲೂಕಾ ಪಂಚಾಯ್ತಿ ಸಭಾ ಭವನದಲ್ಲಿಬುಧವಾರ ನಡೆದಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಗಳು14ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಹಣ ಕಾಯ್ದಿರಿಸುವಂತೆ ತಿಳಿಸಿದರು.

ತಾಲ್ಲೂಕಿನಲ್ಲಿ ಮಳೆಯ ಕೊರತೆಯಿಂದನದಿಗಳಲ್ಲಿ ನೀರು ಪ್ರಮಾಣ ದಿನೇದಿನೇಕಡಿಮೆ ಆಗುತ್ತಿದೆ. ತಾಂತ್ರಿಕ ದೋಷದಿಂದ ಸ್ಥಗಿತವಾಗಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಬೋರವೆಲ್‌ಗಳನ್ನುಕೂಡಲೇ ಸರಿಪಡಿಸಬೇಕು. ತೋಟದ ವಸತಿಗಳ ಜನತೆಗೆ ಟ್ಯಾಂಕರ್ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ADVERTISEMENT

ನರೇಗಾ ಕಾಮಗಾರಿ ಗಳನ್ನು ಸೂಕ್ತರೀತಿಯಲ್ಲಿಕೈಗೊಂಡು,ನಿಗದಿತ ಅವದಿಯಲ್ಲಿ ಮುಗಿಸಬೇಕು. ಅಧಿಕಾರಿ ಗಳು ವೈಯಕ್ತಿಕ ಶೌಚಾಲಯಗಳನ್ನು ಬಳಸುವಂತೆ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಅವರು ಹೇಳಿದರು.

ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕಅಧಿಕಾರಿ ರವಿಂದ್ರ ಬಂಗಾರೆಪ್ಪನವರ, ಸಹಾಯಕ ಅಭಿಯಂತರ ಎ.ಟಿ. ಅಸ್ಕಿ, ವ್ಯವಸ್ಥಾಪಕ ಉದಯ ಪಾಟೀಲ ಇದ್ದರು.

*
ಬೇಸಿಗೆಯಲ್ಲಿ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದು. ಸಮರ್ಪಕ ನೀರಿನ ಪೂರೈಕೆಗಾಗಿ ಅಧಿಕಾರಿಗಳು ಈಗಿನಿಂದಲೇ ಯೋಜನೆ ರೂಪಿಸಬೇಕು.
-ಮಹೇಶ ಕುಮಠಳ್ಳಿ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.