ADVERTISEMENT

ಕೊಯ್ನಾ ಜಲಾಶಯದಿಂದ ನೀರು ಬಿಡುವ ಸೂಚನೆ: ನದಿ ತೀರದಲ್ಲಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 17:23 IST
Last Updated 28 ಆಗಸ್ಟ್ 2024, 17:23 IST
<div class="paragraphs"><p>ಮಹಾರಾಷ್ಟ್ರದ ಕೊಯ್ನಾ ಜಲಾಶಯದ ನೋಟ</p></div>

ಮಹಾರಾಷ್ಟ್ರದ ಕೊಯ್ನಾ ಜಲಾಶಯದ ನೋಟ

   

ಚಿಕ್ಕೋಡಿ: ಮಹಾರಾಷ್ಟ್ರ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕೊಯ್ನಾ ಆಣೆಕಟ್ಟೆಯಿಂದ 32,100 ಕ್ಯುಸೆಕ್ ನೀರನ್ನು ಗುರುವಾರ ಬೆಳಿಗ್ಗೆ 6ರಿಂದ ಹರಿಬಿಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ.

105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯದಲ್ಲಿ 101.78 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಆಣೆಕಟ್ಟೆಯಿಂದ ನೀರು ಬಿಡಲು ನಿರ್ಧರಿಸಲಾಗಿದೆ.

ADVERTISEMENT

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ ನದಿ ತೀರದ ಜನರು ಜಾಗೃತೆಯಿಂದ ಇರಬೇಕೆಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ್ ಸಂಪಗಾವಿ ಪ್ರಕಟಣೆ ತಿಳಿಸಿದ್ದಾರೆ.

ಈಗಾಗಲೇ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿಗೆ ಬುಧವಾರ 11,3763 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಉಪ ವಿಭಾಗ ವ್ಯಾಪ್ತಿಯಲ್ಲಿ 8ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡಿವೆ. ಕೊಯ್ನಾ ಆಣೆಕಟ್ಟೆಯಿಂದ ಹೆಚ್ಚುವರಿಯಾಗಿ ನೀರು ಬಿಡುಗಡೆ ಮಾಡುತ್ತಿದ್ದರಿಂದ ನದಿ ತೀರದಲ್ಲಿ ಮತ್ತೇ ಪ್ರವಾಹದ ಆತಂಕ ಶುರುವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.