ADVERTISEMENT

ಮಲಪ್ರಭಾ ನದಿಗೆ ನೀರು

​ಪ್ರಜಾವಾಣಿ ವಾರ್ತೆ
Published 21 ಮೇ 2020, 10:09 IST
Last Updated 21 ಮೇ 2020, 10:09 IST

ಬೆಳಗಾವಿ: ‘ಜಿಲ್ಲೆಯ ರಾಮದುರ್ಗ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡಿಸಿದ್ದೇನೆ’ ಎಂದು ಸಂಸದರೂ ಆಗಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

‘ಈ ಕುರಿತಂತೆ ಜನರ ಮನವಿ ಆಧರಿಸಿ ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ನೀಡಿದ್ದೆ. ಮನವಿ ಪರಿಶೀಲಿಸಿದ ಅವರು ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಯ ಮೂಲಕ ಒಟ್ಟು 0.35 ಟಿ.ಎಂ.ಸಿ ನೀರನ್ನು ಬುಧವಾರ ಸಂಜೆಯಿಂದ ನಾಲ್ಕು ದಿನಗಳವರೆಗೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT