ADVERTISEMENT

ಅಂಗನವಾಡಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ : ಎಸಿಡಿಪಿಒ ಶಂಕರ ಕುಂಬಾರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 7:32 IST
Last Updated 22 ಸೆಪ್ಟೆಂಬರ್ 2020, 7:32 IST
ಕಡಬಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು
ಕಡಬಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು   

ಕಡಬಿ: ‘ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡುವುದರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು. ಇದಕ್ಕಾಗಿ ಸರ್ಕಾರ ಅಂಗನವಾಡಿ ಕೇಂದ್ರಗಳ ಮೂಲಕ ನೀಡುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಎಸಿಡಿಪಿಒ ಶಂಕರ ಕುಂಬಾರ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಪೋಷಣ ಅಭಿಯಾನ, ಅನ್ನ ಪ್ರಾಶನ, ಸೀಮಂತ ಹಾಗೂ ಮಕ್ಕಳ ಹುಟ್ಟು ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಅಂಥವರಿಗೆ ನೆರವಾಗಲೆಂದು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ’ ಎಂದರು.

ADVERTISEMENT

ಎಸಿಡಿಪಿಒ ಪುಷ್ಪಾ ಹುಲ್ಲತ್ತಿ, ಯರಗಟ್ಟಿ ಆರೋಗ್ಯ ಶಿಕ್ಷಣಾಧಿಕಾರಿ ಐ.ಆರ್. ಗಂಜಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ವಿದ್ಯಾರಾಣಿ ಸೊನ್ನದ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಸುವರ್ಣಗೌರಿ ಕೊಣ್ಣೂರ, ಅಂಗನವಾಡಿ ಮೇಲ್ವಿಚಾರಕ ಎಸ್.ಎಂ. ಕುರಬೇಟ, ಜಿ.ಎಂ. ಮಡಿವಾಳರ, ಎಸ್.ಎಸ್. ಪಾಟೀಲ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಪಿ.ಆರ್. ರಾಯಪ್ಪಗೋಳ, ಆರೋಗ್ಯ ನಿರೀಕ್ಷಕ ಯು.ಬಿ. ಬೇಟಗೇರಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.