ADVERTISEMENT

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಲಕ್ಷ್ಮಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 14:07 IST
Last Updated 4 ಜನವರಿ 2021, 14:07 IST
ಬೆಳಗಾವಿ ತಾಲ್ಲೂಕಿನ ಪಂತ ಬಾಳೇಕುಂದ್ರಿಯ ಮಾರುತಿ ನಗರದಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಭಾಗವಹಿಸಿದ್ದರು
ಬೆಳಗಾವಿ ತಾಲ್ಲೂಕಿನ ಪಂತ ಬಾಳೇಕುಂದ್ರಿಯ ಮಾರುತಿ ನಗರದಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಭಾಗವಹಿಸಿದ್ದರು   

ಬೆಳಗಾವಿ: ‘ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರನ್ನು ಆದರ್ಶವಾಗಿಟ್ಟುಕೊಂಡು ಹೆಣ್ಣು ಮಕ್ಕಳಿಗೆ ಶಿಕ್ಷಣ ಸೌಲಭ್ಯ ನೀಡುವ ನಿಟ್ಟಿನಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಆದ್ಯತೆ ಕೊಡಲಾಗುತ್ತಿದೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.

ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಮಾರುತಿ ನಗರದಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಜನ್ಮದಿನದ ಅಂಗವಾಗಿ ಫೋಟೊಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

‘ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಯಾರೂ ಹಿಂದೇಟು ಹಾಕಬಾರದು. ಸಾವಿತ್ರಿ ಬಾಯಿ ಅವರ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯಬೇಕು’ ಎಂದರು.

ADVERTISEMENT

ನೂತನವಾಗಿ ನಿರ್ಮಿಸಿದ ಸಿಸಿ ರಸ್ತೆಯನ್ನು ಉದ್ಘಾಟಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಗುಲಾಬಿ ಅ. ಕೋಲಕಾರ, ಅಪ್ಸರ್ ಜಮಾದಾರ, ಅಬೇದಾ ಸನದಿ, ಇಸ್ಮಾಯಿಲ್, ಹೊನಗೌಡ, ರಸೂಲ್, ಸಿಮಣ್ಣ, ಶಿವಪ್ಪ ಪೂಜೇರಿ, ಸುರೇಶ ವರ್ಧಮಾನ, ಪ್ರೇಮಾ ಕೋಲಕಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.