ADVERTISEMENT

ಅಪಾಯದಲ್ಲಿರುವ ಸಂವಿಧಾನ ರಕ್ಷಿಸಬೇಕು: ಶಾಸಕ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 13:40 IST
Last Updated 26 ಜನವರಿ 2020, 13:40 IST
ಬೆಳಗಾವಿಯಲ್ಲಿ ಭಾನುವಾರ ನಡೆದ ‘ಸಂವಿಧಾನ ಅನುಷ್ಠಾನ ದಿನ’ ಕಾರ್ಯಕ್ರಮವನ್ನು ಶಾಸಕ ಸತೀಶ ಜಾರಕಿಹೊಳಿ ಸಸಿಗೆ ನೀರೆರೆದು ಉದ್ಘಾಟಿಸಿದರು
ಬೆಳಗಾವಿಯಲ್ಲಿ ಭಾನುವಾರ ನಡೆದ ‘ಸಂವಿಧಾನ ಅನುಷ್ಠಾನ ದಿನ’ ಕಾರ್ಯಕ್ರಮವನ್ನು ಶಾಸಕ ಸತೀಶ ಜಾರಕಿಹೊಳಿ ಸಸಿಗೆ ನೀರೆರೆದು ಉದ್ಘಾಟಿಸಿದರು   

ಬೆಳಗಾವಿ: ‘ಡಾ.ಬಿ.ಆರ್‌. ಅಂಬೇಡ್ಕರ್‌ ರಚಿಸಿದ ಸಂವಿಧಾನ ಅಪಾಯದಲ್ಲಿದೆ. ಅದನ್ನು ವಿರೋಧಿಗಳಿಂದ ಉಳಿಸುವ ಕೆಲಸವಾಗಬೇಕಿದೆ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕದಿಂದ ಗಣರಾಜ್ಯೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಅನುಷ್ಠಾನ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಮ್ಮ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಮೊದಲು ಇದನ್ನು ಎಲ್ಲರೂ ಒಪ್ಪಿಕೊಂಡಿದ್ದರು. ಆದರೆ, ಈಗ ಅದನ್ನು ವಿರೋಧ ಮಾಡುತ್ತಿದ್ದಾರೆ. ಕೆಲವರು ಬದಲಾವಣೆ ಮಾಡಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಹೀಗಾಗಿ, ಸಂವಿಧಾನವನ್ನುಉಳಿಸಿಕೊಳ್ಳುವ ಅನಿರ್ವಾಯತೆ ಇದೆ’ ಎಂದರು.

ADVERTISEMENT

‘ರಾಜಕೀಯ ನಾಯಕರು ಮತ ಬ್ಯಾಂಕ್‌ಗಾಗಿ 5ನೇ ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನದ ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಹೀಗಾಗಿ, ಪರಿಶಿಷ್ಟರು ಮಕ್ಕಳನ್ನು ಎಂಜಿನಿಯರ್, ಡಾಕ್ಟರ್‌ ‌ಮಾಡುವ ಕೆಲಸದಲ್ಲಿ ಮುಳುಗದೇ ಸಂವಿಧಾನದ ಬಗ್ಗೆಯೂ ತಿಳಿಸಬೇಕು’ ಎಂದು ಸಲಹೆ ನೀಡಿದರು.

‘ಸಂವಿಧಾನ ವಿರೋಧಿಗಳು ದಿನನಿತ್ಯ ಸಂಘಟಿತರಾಗುತ್ತಿದ್ದಾರೆ. ಅದಕ್ಕೆ ನೀವು ಕೂಡಾ ಕ್ರಿಯಾಶೀಲರಾಗಿ ಸಂವಿಧಾನದ ಇತಿಹಾಸವನ್ನು ತಿಳಿಸಿಕೊಡುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಮುಂಬೈ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಡಿ. ಮಂತ್ರೇಶಿ ‘ಅಂಬೇಡ್ಕರ್‌ ಅವರು ಬರೆದ ಸಂವಿಧಾನದ ಇತಿಹಾಸ’ ವಿಷಯದ ಕುರಿತು ಮಾತನಾಡಿದರು.

ಸಮಿತಿಯ ರಾಜ್ಯ ಉಪಾಧ್ಯಕ್ಷ ಆರ್. ಮೋಹನ್, ಕಾರ್ಯದರ್ಶಿ ಎಚ್. ಗೋಪಾಲಕೃಷ್ಣ, ಶಿಕ್ಷಣಾಧಿಕಾರಿ ಮಹಾದೇವ ಬೆಳ್ಳಿನ್ನವರ, ಜಿಲ್ಲಾ ಘಟಕದ ಅಧ್ಯಕ್ಷ ರಾಹುಲ ಮೇತ್ರಿ, ರವಿ ಭಜಂತ್ರಿ, ಮಹಾಂತೇಶ ಚಲವಾದಿ, ರಾಜು ಕೋಲಕಾರ, ಶ್ರಾವಣ ಶೆಂಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.