ADVERTISEMENT

ಚುನಾವಣೆ ಒಗ್ಗಟ್ಟಿನಿಂದ ಎದುರಿಸಬೇಕು: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಬಿಜೆಪಿ ಅರಭಾವಿ ಮಂಡಳ ಕಾರ್ಯಕಾರಿಣಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2021, 14:46 IST
Last Updated 13 ನವೆಂಬರ್ 2021, 14:46 IST
ಗೋಕಾಕದಲ್ಲಿ ಶನಿವಾರ ನಡೆದ ಅರಭಾವಿ ಬಿಜೆಪಿ ಮಂಡಲ ಕಾರ್ಯಕಾರಿಣಿಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸಿದರು. ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹಾಗೂ ಪದಾಧಿಕಾರಿಗಳು ಇದ್ದಾರೆ
ಗೋಕಾಕದಲ್ಲಿ ಶನಿವಾರ ನಡೆದ ಅರಭಾವಿ ಬಿಜೆಪಿ ಮಂಡಲ ಕಾರ್ಯಕಾರಿಣಿಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸಿದರು. ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹಾಗೂ ಪದಾಧಿಕಾರಿಗಳು ಇದ್ದಾರೆ   

ಗೋಕಾಕ: ‘ವಿಧಾನಪರಿಷತ್‌ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಗಳನ್ನು ಬಲಪಡಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು’ ಎಂದುರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೋರಿದರು.

ಹೊರವಲಯದ ಗೋಕಾಕ ಸಪ್ಲೈಯರ್ಸ್‌ ಸಭಾಭವನದಲ್ಲಿ ಶನಿವಾರ ನಡೆದ ಬಿಜೆಪಿ ಅರಭಾವಿ ಮಂಡಳದ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

‘ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ನಿಗಮ–ಮಂಡಳಿಗಳಿಗೆ ನೇಮಿಸುವಂತಾಗಲು ಪಕ್ಷದ ಮುಖಂಡರು ಕ್ರಮ ವಹಿಸಬೇಕು’ ಎಂದು ಕೋರಿದರು.

ADVERTISEMENT

ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ‘ಬಿಜೆಪಿ ದೇಶದಲ್ಲಿಯೇ ಅತೀ ದೊಡ್ಡ ಹಾಗೂ ಶಕ್ತಿಶಾಲಿ ಪಕ್ಷವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ಆಧಾರವಾಗಿಟ್ಟುಕೊಂಡು ಸರ್ಕಾರ ಕೆಲಸ ನಿರ್ವಹಿಸುತ್ತಿದೆ. ಶಿಕ್ಷಣ, ಸಂಘಟನೆ ಹಾಗೂ ಹೋರಾಟ ತತ್ವ ಮೈಗೂಡಿಸಿಕೊಂಡು ಇಡೀ ದೇಶದ ಸಮಗ್ರ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಎಲ್ಲ ವರ್ಗಗಳ ಅಭಿವೃದ್ಧಿಗೆ ಸಾಕಷ್ಟುಯೋಜನೆಗಳನ್ನು ರೂಪಿಸಿದ್ದಾರೆ’ ಎಂದರು.

‘ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಲು ಪಕ್ಷದ ಮುಖಂಡರು ಒಗ್ಗಟ್ಟಾಗಿ ಶ್ರಮಿಸಬೇಕು. ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಕಾರ್ಯಕರ್ತರು ಮುಂದಾಗಬೇಕು. ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ದುಡಿಯಬೇಕು’ ಎಂದು ಕೋರಿದರು.

ಸಂಸದೆ ಮಂಗಲಾ ಅಂಗಡಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಕಾರ್ಯಕರ್ತರದ್ದಾಗಿದೆ’ ಎಂದರು.

ಬಿಜೆಪಿ ಅರಭಾವಿ ಮಂಡಳದ ಅಧ್ಯಕ್ಷ ಮಹಾದೇವ ಅಧ್ಯಕ್ಷತೆ ವಹಿಸಿದ್ದರು. ಬೆಳಗಾವಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಬಂಡಾರಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಸಂದೀಪ ದೇಶಪಾಂಡೆ, ಗೋವಿಂದ ಕೊಪ್ಪದ, ಮುತ್ತೆಪ್ಪ ಮನ್ನಾಪೂರ, ಆನಂದ ಮೂಡಲಗಿ, ಪ್ರಕಾಶ ಮಾದರ, ಮಂಗಲಾ ಹಿರೇಮಠ, ಈರಣ್ಣ ಢವಳೇಶ್ವರ, ಮಹಾಂತೇಶ ಕುಡಚಿ, ಪರಸಪ್ಪ ಬಬಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.