ADVERTISEMENT

‘ಬಿಜೆಪಿ ಪಕ್ಷವನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸಿ’

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 13:42 IST
Last Updated 10 ಆಗಸ್ಟ್ 2021, 13:42 IST
ನಾಗರಮುನ್ನೋಳಿ ಸಮೀಪದ ತೋರಣಹಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಿಣಿಯನ್ನು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಸಸಿ ನೆಡುವ ಮೂಲಕ ಉದ್ಘಾಟಿಸಿದರು
ನಾಗರಮುನ್ನೋಳಿ ಸಮೀಪದ ತೋರಣಹಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಿಣಿಯನ್ನು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಸಸಿ ನೆಡುವ ಮೂಲಕ ಉದ್ಘಾಟಿಸಿದರು   

ನಾಗರಮುನ್ನೋಳಿ: ‘ಪದಾಧಿಕಾರಿಗಳು ಮತಗಟ್ಟೆ ಶಕ್ತಿ ಕೇಂದ್ರಗಳ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷವನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸಬೇಕು’ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಹೇಳಿದರು.

ಸಮೀಪದ ತೋರಣಹಳ್ಳಿ ಗ್ರಾಮದಲ್ಲಿ ನಡೆದ ಮೋರ್ಚಾದ ಚಿಕ್ಕೋಡಿ ಜಿಲ್ಲಾ ಘಟಕದ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸಕಾರಾತ್ಮಕವಾಗಿ ಬದಲಾವಣೆ ಕಾಣುತ್ತಿದೆ. ಇಡೀ ವಿಶ್ವ ನಮ್ಮ ದೇಶದತ್ತ ನೋಡುತ್ತಿದೆ. ಇದನ್ನು ಜನರಿಗೆ ತಿಳಿಸಬೇಕು. ಕಾರ್ಯಕರ್ತರನ್ನು ಪ್ರೀತಿಯಿಂದ ಕಂಡು ಪಕ್ಷದ ಬೆಳವಣಿಗೆ ಪ್ರೇರಣೆ ನೀಡಬೇಕು. ಎಲ್ಲ ಸಮಾಜಗಳನ್ನು ಒಗ್ಗೂಡಿಸಿಕೊಂಡು ಹೋಗಬೇಕು. ವಾರಕ್ಕೊಮ್ಮೆ ಪದಾಧಿಕಾರಿಗಳು ಸೇರಿ ಸಮಾಲೋಚನೆ ನಡೆಸಿ ಕಾರ್ಯಕ್ರಮ ರೂಪಿಸಬೇಕು’ ಎಂದರು.

ADVERTISEMENT

ಮೋರ್ಚಾದ ರಾಜ್ಯ ಘಟಕದ ಕಾರ್ಯದರ್ಶಿ ಕಿರಣ ಜಾಧವ, ‘ಮುಂಬರುವ ತಾ.ಪಂ. ಮತ್ತು ಜಿ.ಪಂ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಶ್ರಮಿಸಬೇಕು’ ಎಂದು ತಿಳಿಸಿದರು.

ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ ಮಾತನಾಡಿದರು. ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಶ್ರೀಶೈಲ ಸೇಲಾಪಗೋಳ, ಬಸು ಮಾಳಗಿ, ಕಲ್ಲಪ್ಪ ಕಮತೆ, ರಾಜು ಹರಗನ್ನವರ, ರವಿ ಹೀರೆಕೋಡಿ, ಸಿದ್ದು ಖಿಂಡಿ, ಅಪ್ಪು ಖೋತ ಉಪಸ್ಥರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.