ADVERTISEMENT

ಮಹದಾಯಿ ನೀರು ಬಳಕೆಗೆ ಕ್ರಮ: ರಮೇಶ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 6:22 IST
Last Updated 3 ಫೆಬ್ರುವರಿ 2021, 6:22 IST
ಮಹದಾಯಿ ಹೋರಾಟಗಾರರ ನಿಯೋಗವು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರನ್ನು ಬೆಂಗಳೂರಿನಲ್ಲಿ ಬುಧವಾರ ಚರ್ಚಿಸಿತು
ಮಹದಾಯಿ ಹೋರಾಟಗಾರರ ನಿಯೋಗವು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರನ್ನು ಬೆಂಗಳೂರಿನಲ್ಲಿ ಬುಧವಾರ ಚರ್ಚಿಸಿತು   

ಬೆಳಗಾವಿ: ‘ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಭರವಸೆ ನೀಡಿದರು.

ತಮ್ಮನ್ನು ಬೆಂಗಳೂರಿನಲ್ಲಿ ಭೇಟಿಯಾದ ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವರು, ‘ನಮ್ಮ ಪಾಲಿನ‌ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು’ ಎಂದು ಹೇಳಿದರು.

‘ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆ ವಿಮೆ ಮತ್ತು ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

ನವಲಗುಂದ ಶಾಸಕ ಶಂಕರಪಾಟೀಲ ಮುನೇನಕೊಪ್ಪ, ಮಹದಾಯಿ ಹೋರಾಟ ಸಮಿತಿಯ ಅಧ್ಯಕ್ಷ ದ್ಯಾಮಪ್ಪಯ್ಯ ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.