ADVERTISEMENT

ಶನಿವಾರ, ಭಾನುವಾರ ಸಂಪೂರ್ಣ ಲಾಕ್‌ಡೌನ್‌

​ಪ್ರಜಾವಾಣಿ ವಾರ್ತೆ
Published 18 ಮೇ 2021, 15:14 IST
Last Updated 18 ಮೇ 2021, 15:14 IST

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೇ 22ರ ಬೆಳಿಗ್ಗೆ 6ರಿಂದ ಮೇ 24ರ ಬೆಳಿಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶಿಸಿದ್ದಾರೆ.

‘ಈ ಅವಧಿಯಲ್ಲಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಅನ್ವಯಿಸುವುದಿಲ್ಲ. ಅಂತರರಾಜ್ಯ ಮತ್ತು ಅಂತರಜಿಲ್ಲೆಗಳಿಗೆ ಸಂಚರಿಸುವ ಸರಕು ಹಾಗೂ ಸಾಗಣೆ ವಾಹನಗಳಿಗೆ, ಆ ದಿನಗಳಿಗೆ ಈಗಾಗಲೇ ಪೂರ್ವಾನುನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಅವಕಾಶವಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಆದೇಶ ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಹಿಂತೆ 188ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.