ADVERTISEMENT

ಖಾನಾಪುರ: ಪಶ್ಚಿಮ ಘಟ್ಟದಲ್ಲಿ ಮುಂದುವರಿದ ಮಳೆ

ಹಿಡಕಲ್ ಡ್ಯಾಂನಿಂದ 5 ಸಾವಿರ ಕ್ಯೂಸೆಕ್ ನೀರು 6 ಕ್ರಸ್ಟ್ ಗೇಟ್ ಮೂಲಕ ನದಿಗೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 2:31 IST
Last Updated 11 ಜುಲೈ 2025, 2:31 IST
ಖಾನಾಪುರ ತಾಲ್ಲೂಕಿನ ಕಣಕುಂಬಿ ಬಳಿ ಬ್ರಿಡ್ಜ್ ಕಂ ಬಂದಾರ್ ತುಂಬಿದ್ದು, ಗುರುವಾರ ನೀರು ಹರಿಯುತ್ತಿರುವುದು.
ಖಾನಾಪುರ ತಾಲ್ಲೂಕಿನ ಕಣಕುಂಬಿ ಬಳಿ ಬ್ರಿಡ್ಜ್ ಕಂ ಬಂದಾರ್ ತುಂಬಿದ್ದು, ಗುರುವಾರ ನೀರು ಹರಿಯುತ್ತಿರುವುದು.   

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಮತ್ತು ಗುರುವಾರ ಮುಂಜಾನೆ ಕೆಲ ಗಂಟೆಗಳ ಕಾಲ ಉತ್ತಮ ಮಳೆ ಸುರಿಯಿತು. ಪಶ್ಚಿಮ ಘಟ್ಟದ ಗೋವಾ-ಕರ್ನಾಟಕ ಗಡಿಯಲ್ಲಿ ಮಳೆ ಮುಂದುವರೆದಿದೆ. ಮಲಪ್ರಭಾ, ಮಹದಾಯಿ ಮತ್ತು ಪಾಂಡರಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದೆ.

ಕೋಟ್ನಿ, ಅಲಾತ್ರಿ, ಮಂಗೇತ್ರಿ, ಕುಂಬಾರ, ತಟ್ಟೀ, ಪಣಸೂರಿ, ಬೈಲ್, ಕಳಸಾ, ನಿಟ್ಟೂರ, ಪಂಚಶೀಲಾ, ಬಂಡೂರಿ ಮತ್ತಿತರ ಹಳ್ಳಗಳೂ ತುಂಬಿ ಹರಿಯುತ್ತಿವೆ. ಭೀಮಗಡ ವನ್ಯಧಾಮದ ಗವ್ವಾಳಿ, ಕೊಂಗಳಾ, ಪಾಸ್ತೊಳ್ಳಿ, ಅಮಗಾಂವ, ದೇಗಾಂವ ಗ್ರಾಮಗಳಿಗೆ ಸಾಗುವ ಮಾರ್ಗದ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT