ADVERTISEMENT

‘3 ಲಕ್ಷ ಜನ ಸೇರಿಸ್ತೀವಿ, ಕೋವಿಡ್ ನಿಯಮ ಪಾಲಿಸ್ತೀವಿ’

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 15:54 IST
Last Updated 10 ಜನವರಿ 2021, 15:54 IST
ಬಿಜೆಪಿಯಿಂದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭಾನುವಾರ ವೀಕ್ಷಿಸಿದರುಪ್ರಜಾವಾಣಿ ಚಿತ್ರ
ಬಿಜೆಪಿಯಿಂದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭಾನುವಾರ ವೀಕ್ಷಿಸಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ‘ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ.17ರಂದು ನಡೆಯುವ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. 3 ಲಕ್ಷಕ್ಕೂ ಹೆಚ್ಚಿನ ಜನರನ್ನು ಸೇರಿಸುತ್ತೇವೆ. ಕೋವಿಡ್ ನಿಯಮಗಳನ್ನೂ ಪಾಲಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶದ ಸಿದ್ಧತೆ ಬಗ್ಗೆ ಮುಖಂಡರೊಂದಿಗೆ ಭಾನುವಾರ ಚರ್ಚಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತರನ್ನು ಅಭಿನಂದಿಸುವುದು, ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣಾ ಸಿದ್ಧತೆಗೆ ರಣಕಹಳೆ ಮೊಳಗಿಸುವುದು ಸಮಾವೇಶದ ಉದ್ದೇಶವಾಗಿದೆ. ಇದರಿಂದ ಈ ಭಾಗದಲ್ಲಿ ಪಕ್ಷದ ಶಕ್ತಿ ವೃದ್ಧಿಸಲಿದೆ. ಜಿಲ್ಲೆಯ ಎಲ್ಲ ಮುಖಂಡರೂ ಸಂಘಟಿತರಾಗಿ ಸಮಾವೇಶ ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದೇವೆ’ ಎಂದರು.

ADVERTISEMENT

‘ಸಮಾವೇಶದ ನಂತರ ಅಮಿತ್ ಶಾ ಅವರೊಂದಿಗೆ ಮುಖಂಡರ ಸಭೆಯನ್ನು ನಡೆಸುವ ಉದ್ದೇಶವೂ ಇದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.