ADVERTISEMENT

ವಿಶೇಷ ಅನುದಾನಕ್ಕಾಗಿ ಧ್ವನಿ ಎತ್ತುವೆ: ಶಾಸಕ ಸವದಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2024, 13:50 IST
Last Updated 28 ನವೆಂಬರ್ 2024, 13:50 IST
ಅಥಣಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗೆ ಶಾಸಕ ಲಕ್ಷಣ ಸವದಿ ಭೂಮಿಪಪೂಜೆ ನೆರವೇರಿಸಿದರು
ಅಥಣಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗೆ ಶಾಸಕ ಲಕ್ಷಣ ಸವದಿ ಭೂಮಿಪಪೂಜೆ ನೆರವೇರಿಸಿದರು   

ಅಥಣಿ: ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗತ್ಯವಿಲ್ಲ, ಬದಲಿಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚಿಸಿ ಅಗತ್ಯವಿರುವ ಅನುದಾನ ನೀಡಬೇಕಿದೆ. ಈ ಮೂಲಕ ಪ್ರತ್ಯೇಕ ರಾಜ್ಯದ ಕೂಗಿಗೆ ಅಂತ್ಯಹಾಡಲು ಸಾಧ್ಯ. ಈ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವೆ’ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅಥಣಿ ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಕೈಗೊಳ್ಳುವ ₹4.10 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಹೈದರಾಬಾದ್ ಕರ್ನಾಟಕಕ್ಕೆ ವಿಶಿಷ್ಟ ಸ್ಥಾನಮಾನ ನೀಡಿದಂತೆ ಕಿತ್ತೂರು ಕರ್ನಾಟಕಕ್ಕೂ ವಿಶೇಷ ಸ್ಥಾನಮಾನ ನೀಡುವ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.

ADVERTISEMENT

ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಲಿ, ಉಪಾಧ್ಯಕ್ಷೆ ಭುವನೇಶ್ವರಿ ಬೀ. ಯಕ್ಕಂಚಿ, ಸದಸ್ಯರಾದ ರಾವಸಾಬ ಐಹೊಳೆ, ಮಲ್ಲಿಕಾರ್ಜುನ ಬೂಟಾಳಿ, ಪ್ರಮೋದ ಬೀಳೂರ, ರಾಜಶೇಖರ ಗುಡ್ಡೋಡಗಿ, ಕಲ್ಮೇಶ ಮಡ್ಡಿ, ಬಸವರಾಜ ಪಾಟೀಲ, ಮುಖಂಡರಾದ ರವಿ ಬಡಕಂಬಿ, ರಾಜು ಆಲಬಾಳ, ಪೀರೋಜ ಖೆಮಲಾಪುರ, ಮುಖ್ಯಾಧಿಕಾರಿ ಅಶೋಕ ಗುಡಿಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.