ADVERTISEMENT

ಸುವರ್ಣ ವಿಧಾನಸೌಧ ಸದ್ಬಳಕೆಗೆ ಕ್ರಮ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 14:07 IST
Last Updated 8 ಆಗಸ್ಟ್ 2021, 14:07 IST
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭಾನುವಾರ ಭೇಟಿಯಾಯಿತು
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭಾನುವಾರ ಭೇಟಿಯಾಯಿತು   

ಬೆಳಗಾವಿ: ‘ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ. ಸದ್ಬಳಕೆಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ಆರ್.ಟಿ. ನಗರ ನಿವಾಸದಲ್ಲಿ ಭಾನುವಾರ ತಮ್ಮನ್ನು ಭೇಟಿಯಾದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ನಿಯೋಗಕ್ಕೆ ಈ ಭರವಸೆ ನೀಡಿದ್ದಾರೆ.

‘ಗಡಿ ಅಭಿವೃದ್ಧಿ ಪ್ರಾಧಿಕಾರ, ಗಡಿ ಸಂರಕ್ಷಣಾ ಆಯೋಗ, ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಕಚೇರಿಗಳ ಸ್ಥಳಾಂತರ ಹಾಗೂ ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರು ನಾಮಕರಣ ಮಾಡಬೇಕು’ ಎನ್ನುವ ಕುರಿತು ನಿಯೋಗವು ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದೆ.

ADVERTISEMENT

‘2006ರ ಫೆ. 16ರಂದು ಆಗಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ 2014ರ ಅ.14ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುವಿಧಾನಸೌಧದಲ್ಲಿ ನಾಡು, ನುಡಿ ಮತ್ತು ಗಡಿಗೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರು ಮತ್ತು ಚಿಂತಕರ ಸಭೆ ಕರೆದಿದ್ದರು. ತಾವೂ ಸುವರ್ಣ ವಿಧಾನಸೌಧದಲ್ಲಿ ಇಂತಹ ಸಭೆಯನ್ನು ಕರೆಯಬೇಕು’ ಎಂದು ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದರು.

‘ಅ.23ರಂದು ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವದ ಮುನ್ನವೇ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು’ ಎಂದು ಕೋರಿದರು.

ಮೈನೋದ್ದೀನ್ ಮಕಾನದಾರ, ಶಿವಪ್ಪ ಶಮರಂತ, ಹರೀಶ ಕರಿಗೊನ್ನವರ, ವೀರೇಂದ್ರ ಗೋಬರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.