ADVERTISEMENT

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಕಲ್ಪ; ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 16:01 IST
Last Updated 16 ಜುಲೈ 2021, 16:01 IST
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾದಲ್ಲಿ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾದಲ್ಲಿ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು   

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.

‘ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು. ಗುಣಮಟ್ಟದಿಂದ ಕೂಡಿರಬೇಕು. ಇಡೀ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಈ ಕಟ್ಟಡ ಸಾಕ್ಷಿಯಾಗಬೇಕು. ಗ್ರಾಮದ ಜನರು ಮುಂದಿನ ದಿನಗಳಲ್ಲಿ ಒಗ್ಗಟ್ಟಾಗಿ ಅಭಿವೃದ್ಧಿಯ ಮಂತ್ರ ಪಠಿಸುವಂತಾಗಬೇಕು’ ಎಂದು ಅವರು ಆಶಿಸಿದರು.

‘ನಾನು ಶಾಸಕಿಯಾದ ನಂತರ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಯಾವ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎನ್ನುವುದು ಜನರಿಗೆ ತಿಳಿದಿದೆ. ನಿಮ್ಮೆಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ನಿಮ್ಮ ಸಹಕಾರದ ನಿರೀಕ್ಷೆಯಲ್ಲಿದ್ದೇನೆ. ಹಲವು ಅಭಿವೃದ್ಧಿ ಯೋಜನೆಗಳಿಗೆ ಸಂಕಲ್ಪ ತೊಟ್ಟಿದ್ದೇನೆ’ ಎಂದು ತಿಳಿಸಿದರು.

ADVERTISEMENT

‘ಇಡೀ ಗ್ರಾಮೀಣ ವಿಧಾನಸಭಾ ಕ್ಷೇತ್ರ ಒಂದು ಕುಟುಂಬದಂತಿದೆ. ಕುಟುಂಬದ ಸದಸ್ಯೆಯಾಗಿ, ನಿಮ್ಮೆಲ್ಲರ ಮನೆಮಗಳಾಗಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಗ್ರಾಮಗಳೂ ಸಮಾನವಾಗಿ ಅಭಿವೃದ್ಧಿಯಾಗಬೇಕು. ಆ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದ್ದೇನೆ. ನಿರಂತರವಾಗಿ ಕೆಲಸ ಮಾಡುತ್ತಿದ್ದೇನೆ. ಒಟ್ಟಾಗಿ ಮುನ್ನಡೆಯೋಣ’ ಎಂದರು.

ಮೊದಗಾ ಮತ್ತು ಹೊನ್ನಿಹಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು, ಮುಖಂಡ ಶಂಕರಗೌಡ ಪಾಟೀಲ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ, ಗಂಗಣ್ಣ ಕಲ್ಲೂರ, ಬಸವರಾಜ ಮ್ಯಾಗೋಟಿ, ಉಷಾತಾಯಿ ಪಾಟೀಲ, ಓಮಣ್ಣ ಅಸ್ಟೇಕರ, ಬರಮಾ ಕಟಬುಗೋಳ, ಬಸವಣ್ಣಿ ಮುಗಳಿ, ಪರುಶರಾಮ ರಾಮಣೆ, ಕರವೇ ಸಂಚಾಲಕ ಮಹಾದೇವ ತಳವಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.