ನ್ಯಾಯಾಲಯ ಆದೇಶ (ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದ ಪ್ರಮುಖ ಆರೋಪಿಯ ಜಾಮೀನು ಅರ್ಜಿಯನ್ನು ಇಲ್ಲಿನ 11ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಟ್ ನ್ಯಾಯಾಲಯ ತಿರಸ್ಕರಿಸಿದೆ.
ಕಳೆದ ಡಿ.11ರಂದು ಪ್ರೇಮಿಗಳಿಬ್ಬರು ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ 13 ಆರೋಪಿಗಳು ಯುವಕನ ತಾಯಿ ಮೇಲೆ ದೌರ್ಜನ್ಯ ಎಸಗಿದ್ದರು. ಪ್ರಮುಖ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿದ ನ್ಯಾಯಾಧೀಶ ಇ.ಎಸ್.ಈರಣ್ಣ ಅವರು ತಿರಸ್ಕರಿಸಿದರು.
ಅಭಿಯೋಜಕಿ ಶೈಲಜಾ ಪಾಟೀಲ ಸರ್ಕಾರದ ಪರ ವಕಾಲತ್ತು ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.