ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ನದಿಯಲ್ಲಿ ಮಂಗಳವಾರ ವಿವಾಹಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಚನ್ನಮ್ಮನ ಕಿತ್ತೂರು ತಾಲೂಕಿನ ದೇವರಶೀಗಿಹಳ್ಳಿ ಗ್ರಾಮದ ವಿದ್ಯಾಶ್ರೀ ಬಸವರಾಜ ಕಾಗಿ (25) ಮೃತ ಮಹಿಳೆಯಾಗಿದ್ದು, ಸ್ಥಳಕ್ಕೆ ಕಿತ್ತೂರು ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ ಗಂಗೋಳ, ಎಎಸ್‌ಐ ಆರ್.ಕೆ.ಗೆಜೇರಿ, ಸಿಬ್ಬಂದಿ ಆರ್.ಎಫ್.ಗೌರಕ್ಕನವರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೆಲದಿನಗಳ ಹಿಂದೆ ಚರ್ಮ ಕಾಯಿಲೆಗೆ ತುತ್ತಾಗಿ ಚೇತರಿಸಿಕೊಂಡಿದ್ದ ಮೃತ ಮಹಿಳೆ, ಫಕ್ಕಿಗಳ ಕಲೆಗಳು ಹೋಗಿರದ ಕಾರಣ ಮಾನಸಿಕವಾಗಿ ನೊಂದಿದ್ದರು. ಇದೇ ನೋವಲ್ಲಿ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.