ADVERTISEMENT

ಬೆಳಗಾವಿ: ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ಮಹಿಳೆ ಪತ್ತೆ

​ಪ್ರಜಾವಾಣಿ ವಾರ್ತೆ
Published 24 ಮೇ 2020, 11:50 IST
Last Updated 24 ಮೇ 2020, 11:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ಪತಿ ಜೊತೆಗೆ ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ಮಹಿಳೆಯನ್ನು ಪೊಲೀಸರು ಭಾನುವಾರ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

ನೆರೆಯ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನೂಲ್ ಗ್ರಾಮದಿಂದ‌ ಗೋಕಾಕ ತಾಲ್ಲೂಕಿನ ಪಂಜಾನಟ್ಟಿ ಗ್ರಾಮಕ್ಕೆ ಬಂದಿದ್ದ 30 ವರ್ಷ ವಯಸ್ಸಿನ ಮಹಿಳೆಯನ್ನು ಗೋಕಾಕದ ಬಿಸಿಎಂ ಹಾಸ್ಟೆಲ್‌ನಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಅವರು ಪತಿಯನ್ನು ಸೇರುವುದಕ್ಕಾಗಿ ಮಗುವಿನೊಂದಿಗೆ ಶನಿವಾರ ಕೇಂದ್ರದಿಂದ ಪರಾರಿಯಾಗಿದ್ದರು. ಇದು ಆತಂಕಕ್ಕೆ ಹಾಗೂ ಪೊಲೀಸರ ತಲೆನೋವಿಗೆ ಕಾರಣವಾಗಿತ್ತು.

ಮಹಿಳೆಯು ಮಗು ಹಾಗೂ ಪತಿಯೊಂದಿಗೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಪತ್ತೆಯಾಗಿದ್ದಾರೆ. ನೆಂಟರೊಬ್ಬರ ಮನೆಯಲ್ಲಿ ಅವರು ಇದ್ದರು. ಮೂವರನ್ನೂ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.