ADVERTISEMENT

ಮಹಿಳೆಯರಿಂದ ನಮ್ಮ ಸಂಸ್ಕೃತಿ, ಸಂಸ್ಕಾರ ಉಳಿದಿದೆ: ಮಹೇಶ ಕುಮಠಳ್ಳಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 14:37 IST
Last Updated 8 ಜನವರಿ 2020, 14:37 IST
ಅಥಣಿಯಲ್ಲಿ ಮೋಟಗಿ ಮಠದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮ್ಮಪ್ರಭು ಸ್ವಾಮೀಜಿ ಅವರನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು
ಅಥಣಿಯಲ್ಲಿ ಮೋಟಗಿ ಮಠದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮ್ಮಪ್ರಭು ಸ್ವಾಮೀಜಿ ಅವರನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು   

ಅಥಣಿ: ‘ಮಹಿಳೆಯರಿಂದಾಗಿ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ಉಳಿದಿದೆ’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಇಲ್ಲಿನ ಮೋಟಗಿ ಮಠದಲ್ಲಿ ಲಿಂ. ಚನ್ನಬಸವ ಸ್ವಾಮೀಜಿ ಅವರ 95ನೇ ಸ್ಮರಣೋತ್ಸದ ಅಂಗವಾಗಿ ನಡೆದ ಶರಣ ಸಂಸ್ಕೃತಿ ಮೇಳದಲ್ಲಿ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆಯರು ಉನ್ನತ ಶಿಕ್ಷಣ ಕಡೆಗೆ ಒಲವು ತೋರಿಸಬೇಕು. ಅದರಲ್ಲೂ ಗ್ರಾಮೀಣ ಪ್ರದೇಶದ ಮಹಿಳೆಯರು ಉನ್ನತ ಶಿಕ್ಷಣ ಪಡೆಯಲು ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಸಾಕ್ಷರತೆ ಹೆಚ್ಚಾದಂತೆ ಸಮಾನತೆ ಬೆಳೆಯುತ್ತದೆ. ಹಿಂದಿಗಿಂತಲೂ ಇಂದು ಸಾಕಷ್ಟು ಮಹಿಳೆಯರು ವಿದ್ಯಾವಂತರಾಗುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ’ ಎಂದರು.

ಸಾನ್ನಿಧ್ಯ ವಹಿಸಿದ್ದ ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮ್ಮಪ್ರಭು ಸ್ವಾಮೀಜಿ ಮಾತನಾಡಿದರು. ಪ್ರಭುಚನ್ನಬಸವ ಸ್ವಾಮೀಜಿ, ಡಾ.ಮೈತ್ರೇಯಣಿ ಗದಿಗೆಪ್ಪಗೌಡರ, ಗುರುಸಿದ್ದ ಸ್ವಾಮೀಜಿ, ಮರುಳಸಿದ್ದ ಸ್ವಾಮೀಜಿ, ಶಿವಪಂಚಾಕ್ಷರಿ ಸ್ವಾಮೀಜಿ, ಮಹಾಂತ ಸ್ವಾಮೀಜಿ, ಅನಿಲ ಸುಣಧೋಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.