ADVERTISEMENT

ಹಿರಣ್ಯಕೇಶಿ ನದಿಯಲ್ಲಿ ಮಹಿಳೆ ಶವ ಪತ್ತೆ 

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 9:38 IST
Last Updated 2 ಆಗಸ್ಟ್ 2022, 9:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಕ್ಕೇರಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಬಸ್ತವಾಡ ಗ್ರಾಮದ ಹೊರವಲಯದಲ್ಲಿ ಹಿರಣ್ಯಕೇಶಿ ನದಿಯಲ್ಲಿ ಅಪರಿಚಿತ ಮಹಿಳೆ ಶವ ಮಂಗಳವಾರ ಪತ್ತೆಯಾಗಿದೆ.

ಮಹಿಳೆ ವಯಸ್ಸು 60 ವರ್ಷ ಎಂದು ಅಂದಾಜಿಸಲಾಗಿದೆ. ಹುಕ್ಕೇರಿ ಇನ್ ಸ್ಪೆಕ್ಟರ್ ರಫೀಕ್ ತಹಸೀಲ್ದಾರ ಹಾಗೂ ಸಿಬ್ಬಂದಿ ಮಂಜುನಾಥ ಕಬ್ಬೂರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಹಿಳೆ ಗುರುತು ಹಾಗೂ ಸಾವಿಗೆ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.