ADVERTISEMENT

‘ಮಹಿಳೆಯರು ಆರ್ಥಿಕವಾಗಿ ಸಬಲರಾಗಿ’

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2025, 2:23 IST
Last Updated 23 ಡಿಸೆಂಬರ್ 2025, 2:23 IST
ಹುಕ್ಕೇರಿ ಪಟ್ಟಣದಲ್ಲಿ ಮಂಗಳವಾರ ಜರುಗಿದ ‘ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭೆಯ’ಸಮಾರಂಭವನ್ನು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘಧ ಅಧ್ಯಕ್ಷ ಮಹಾವೀರ ನಿಲಜಗಿ ಉದ್ಘಾಟಿಸಿದರು. ಅಭಿನವ ಮಂಜುನಾಥ ಸ್ವಾಮೀಜಿ, ಪುರಸಭೆ ಮಾಜಿ ಅಧ್ಯಕ್ಷ ಅಣ್ಣಾಗೌಡ ಪಾಟೀಲ್, ಗಣ್ಯರು ಇದ್ದಾರೆ.
ಹುಕ್ಕೇರಿ ಪಟ್ಟಣದಲ್ಲಿ ಮಂಗಳವಾರ ಜರುಗಿದ ‘ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭೆಯ’ಸಮಾರಂಭವನ್ನು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘಧ ಅಧ್ಯಕ್ಷ ಮಹಾವೀರ ನಿಲಜಗಿ ಉದ್ಘಾಟಿಸಿದರು. ಅಭಿನವ ಮಂಜುನಾಥ ಸ್ವಾಮೀಜಿ, ಪುರಸಭೆ ಮಾಜಿ ಅಧ್ಯಕ್ಷ ಅಣ್ಣಾಗೌಡ ಪಾಟೀಲ್, ಗಣ್ಯರು ಇದ್ದಾರೆ.   

ಹುಕ್ಕೇರಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಚಿಸಿರುವ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ ಹೇಳಿದರು.

ಮಂಗಳವಾರ ಪಟ್ಟಣದ ಕೋಷ್ಟಿ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗು ಸಾಮೂಹಿಕ ಮಹಾಲಕ್ಷ್ಮೀ ಪೂಜಾ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಜರುಗಿದ ‘ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭಾ’ಉದ್ಘಾಟಿಸಿ ಮಾತನಾಡಿದರು.

ಸಲಿಂ ಕಳಾವಂತ ಮತ್ತು ಇರ್ಷಾದ ಮೊಕಾಶಿ, ಯೋಜನಾ ಜಿಲ್ಲಾ ನಿರ್ದೇಶಕ ವಿಠ್ಠಲ್ ಸಾಲ್ಯಾನ್, ನಿವೃತ್ತ ಪ್ರಾಧ್ಯಾಪಕ ಪಿ.ಜಿ.ಕೊಣ್ಣೂರ್, ಮುಖಂಡ ಚಂದ್ರಶೇಖರ್ ಗಂಗನ್ನವರ, ಒಕ್ಕೂಟದ ಅಧ್ಯಕ್ಷೆ ಸುರೇಖಾ ಮತ್ತಿಕೊಪ್ಪ ಮಾತನಾಡಿದರು.

ADVERTISEMENT

ಅವಜೀಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ ಮಾತನಾಡಿದರು. ಹುಕ್ಕೇರಿ ಪುರಸಭೆ ಮಾಜಿ ಅಧ್ಯಕ್ಷ ಅಣ್ಣಾಗೌಡ ಪಾಟೀಲ್, ಉಪಾಧ್ಯಕ್ಷೆ ಜ್ಯೋತಿ ಬಡಿಗೇರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಅತಿಥಿಗಳಾಗಿದ್ದರು.

ಪೂಜೆ: ಮುಂಜಾನೆ ಜರುಗಿದ ಮಹಾಲಕ್ಷ್ಮೀ ಪೂಜೆಯನ್ನು ವಿದ್ವಾನ್ ಸಂಪತ್ ಕುಮಾರ ಶಾಸ್ತ್ರೀ ನೇತೃತ್ವದಲ್ಲಿ ನಡೆಯಿತು. ನೂರಾರು ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಯೋಜನಾಧಿಕಾರಿ ಶ್ರೀಕಾಂತ ನಾಯ್ಕ, ವಲಯ ಮೇಲ್ವಿಚಾರಕ ಎಂ. ಸತೀಶ್, ಬಾಗೇವಾಡಿಯ ಫಕ್ಕಿರೇಶ್ ಜಂಗಲಿ, ಒಕ್ಕೂಟದ ಅಧ್ಯಕ್ಷೆ ರೇಣುಕಾ ಮನ್ನಿಕೇರಿ, ಸೇವಾ ಪ್ರತಿನಿಧಿಗಳಾದ ಸುರೇಖಾ, ಕಲಾವತಿ,ಪಾರ್ವತಿ, ಸಂಗೀತಾ, ರೇಣುಕಾ, ಮಾಲನ್, ಗಂಗವ್ವ, ಮಂಜುಳಾ, ರಾಜೇಶ್ವರಿ, ಶ್ವೇತಾ ಸೇರಿದಂತೆ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.

ಯೋಜನಾಧಿಕಾರಿ ಶ್ರೀಕಾಂತ ನಾಯ್ಕ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಫಕ್ಕಿರೇಶ್ ಜಂಗಲಿ ನಿರೂಪಿಸಿದರು. ವಲಯ ಮೇಲ್ವಿಚಾರಕ ಸತೀಶ್ ಎಂ.ವಂದಿಸಿದರು.

ಹುಕ್ಕೇರಿ ಪಟ್ಟಣದಲ್ಲಿ ಮಂಗಳವಾರ ಜರುಗಿದ ‘ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭೆ’ಸಮಾರಂಭದಲ್ಲಿ ಅವಜೀಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘಧ ಅಧ್ಯಕ್ಷ ಮಹಾವೀರ ನಿಲಜಗಿ ಮತ್ತು ಪುರಸಭೆ ಮಾಜಿ ಅಧ್ಯಕ್ಷ ಅಣ್ಣಾಗೌಡ ಪಾಟೀಲ್ ಗಣ್ಯರು ಲಕ್ಷ್ಮೀ ಮೂರ್ತಿಗೆ ಪೂಜೆ ಸಲ್ಲಿಸಿದರು.
ಹುಕ್ಕೇರಿ ಪಟ್ಟಣದಲ್ಲಿ ಮಂಗಳವಾರ ಜರುಗಿದ ‘ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭೆಯ’ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಹಿಳೆಯರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.