ಖಾನಾಪುರ: ಪಟ್ಟಣದ ಶನಾಯಾ ಪಾಮ್ಸ್ ಸಭಾಗೃಹದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿ ಜರುಗಿತು. 100ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ವಿದ್ಯಾರ್ಥಿವೇತನದ ಆದೇಶ ಪ್ರತಿ ವಿತರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಅಂಜಲಿ ನಿಂಬಾಳಕರ, ‘ಮಹಿಳೆಯರ ಸಬಲೀಕರಣ ಅಗತ್ಯವಿದೆ. ರಾಜಕೀಯ ರಂಗದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳಿದ್ದು, ಸ್ವಯಂಪ್ರೇರಿತರಾಗಿ ರಾಜಕೀಯಕ್ಕೆ ಬರಬೇಕು’ ಎಂದು ಸಲಹೆ ನೀಡಿದರು.
ತಾಲ್ಲೂಕು ವೈದ್ಯಾಧಿಕಾರಿ ಡಾ. ಮಹೇಶ ಕಿವಡಸಣ್ಣವರ, ಸ್ತ್ರೀರೋಗಗಳು, ರೋಗ ಹತೋಟಿ, ಒತ್ತಡ ನಿರ್ವಹಣೆ, ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು. ಮಹಿಳೆಯರ ರೋಗ್ಯ ತಪಾಸಣಾ ಶಿಬಿರ ಜರುಗಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ದೀಪಾ ಪಾಟೀಲ, ಯಲ್ಲಪ್ಪ ಸಾಗರ, ಜ್ಞಾನವಿಕಾಸ ಯೋಜನಾಧಿಕಾರಿ ಸುಧಾ ನಾಯ್ಕ, ಗಣಪತಿ ನಾಯ್ಕ, ಮೇಲ್ವಿಚಾರಕ ಯದುನಂದ ಎಲ್., ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮೀ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.