ADVERTISEMENT

‘ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಸಿಗಲಿ’

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2019, 9:11 IST
Last Updated 17 ಮಾರ್ಚ್ 2019, 9:11 IST
ಬೆಳಗಾವಿಯಲ್ಲಿ ಜಿಲ್ಲಾ ಲೇಖಕಿಯರ ಸಂಘದಿಂದ ಶನಿವಾರ ಹಮ್ಮಿಕೊಂಡಿದ್ದ ‘ವಸಂತ ವನವಿಹಾರ’ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಜ್ಯೋತಿ ಬದಾಮಿ, ಕಸಾಪ ಜಿಲ್ಲಾ ಘಟಕದ ಅದ್ಯಕ್ಷೆ ಮಂಗಲಾ ಮೆಟಗುಡ್ಡ ಇದ್ದಾರೆ
ಬೆಳಗಾವಿಯಲ್ಲಿ ಜಿಲ್ಲಾ ಲೇಖಕಿಯರ ಸಂಘದಿಂದ ಶನಿವಾರ ಹಮ್ಮಿಕೊಂಡಿದ್ದ ‘ವಸಂತ ವನವಿಹಾರ’ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಜ್ಯೋತಿ ಬದಾಮಿ, ಕಸಾಪ ಜಿಲ್ಲಾ ಘಟಕದ ಅದ್ಯಕ್ಷೆ ಮಂಗಲಾ ಮೆಟಗುಡ್ಡ ಇದ್ದಾರೆ   

ಬೆಳಗಾವಿ: ಮಹಿಳೆ ಈಗ ಎಲ್ಲ ಕ್ಷೇತ್ರಗಳಲ್ಲೂ ದುಡಿಯುತ್ತಿದ್ದಾಳೆ. ಆಕೆಗೆ ಉದ್ಯೋಗದಲ್ಲಿ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಶೇ 33ರಿಂದ ಶೇ 50ಕ್ಕೆ ಹೆಚ್ಚಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.

ಜಿಲ್ಲಾ ಲೇಖಕಿಯರ ಸಂಘದಿಂದ ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಇಲ್ಲಿನ ವೀರಸೌಧ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ವಸಂತ ವನವಿಹಾರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಪಾಲು, ಸಹಬಾಳ್ವೆ ತತ್ವದ ಬೆನ್ನು ಹತ್ತಿ ಸಾಮಾಜಿಕ, ಸಾಹಿತ್ಯ ಮೊದಲಾದ ಎಲ್ಲ ರಂಗಗಳಲ್ಲೂ ಮುನ್ನುಗ್ಗುವುದು ಮಹಿಳೆಯರ ಗುರಿಯಾಗಬೇಕು’ ಎಂದರು.

ADVERTISEMENT

ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಜ್ಯೋತಿ ಬದಾಮಿ ಮಾತನಾಡಿ, ‘ವರ್ಷ ಪೂರ್ತಿ ಹಲವು ಲೇಖಕಿಯರು ಉನ್ನತ ಮಟ್ಟದ ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿರುವುದು ಹೆಮ್ಮೆಯ ಸಂಗತಿ. ಅದರ ಗೌರವರ್ಥವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಘದ ಸದಸ್ಯರು ಇನ್ನೂ ಹೆಚ್ಚು ವಾಸ್ತವಕ್ಕೆ ತರೆದುಕೊಳ್ಳುವ ನಿಟ್ಟಿನಲ್ಲಿ ಬರವಣಿಗೆಯಲ್ಲಿ ತೊಡಗಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಲೇಖಕಿಯರಾದ ಶೈಲಜಾ ಭಿಂಗೆ, ರಾಜೇಶ್ವರಿ ಹಿರೇಮಠ, ಮಮತಾ ಶಂಕರ, ದೀಪಿಕಾ, ನೀಲಗಂಗಾ, ಶೋಭಾ ಕುಲಕರ್ಣಿ, ಸುಮಾ, ಶಾರದಾ ಹರಕುಣಿ, ಶಬಾನ, ಹಮೇದಾ ದೇಸಾಯಿ, ಇಂದಿರಾ, ಆಶಾ ಕಡಪಟ್ಟಿ, ಜಯಶೀಲಾ, ಗುರುದೇವಿ ಇದ್ದರು.

ಆಶಾ ಯಮಕನಮರಡಿ ನಿರೂಪಿಸಿದರು. ಶಾಲಿನಿ ಚಿನವಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.