ADVERTISEMENT

ಕಡಲೆ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 15:46 IST
Last Updated 3 ಮಾರ್ಚ್ 2024, 15:46 IST
   

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ದೇವಲಾಪುರದಲ್ಲಿ ಕಡಲೆ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಭಾನುವಾರ ಮೃತಪಟ್ಟಿದ್ದಾರೆ.

ಮಹಾದೇವಿ ಮಲ್ಲಪ್ಪ ಗಣಾಚಾರಿ(45) ಮೃತರು. ಅವರಿಗೆ ಪತಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ತಮ್ಮ ಕೃಷಿಭೂಮಿಯಲ್ಲಿ ಕಡಲೆ ರಾಶಿ ಮಾಡುವಾಗ ಯಂತ್ರದೊಳಗೆ ಮಹಿಳೆ ಸಿಲುಕಿ ಒದ್ದಾಡಿದ್ದಾರೆ. ಕುಟುಂಬಸ್ಥರು ತಕ್ಷಣವೇ ಯಂತ್ರ ಬಂದ್‌ ಮಾಡಿ, ಮಹಿಳೆಯನ್ನು ಹೊರತೆಗೆದಿದ್ದಾರೆ. ಆದರೆ, ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ADVERTISEMENT

ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.