ADVERTISEMENT

ಶಿಕ್ಷಣದ ಮೂಲಕ ಧೈರ್ಯ, ವಿಶ್ವಾಸ ತುಂಬಬೇಕು: ಸುಧಾ ಮೂರ್ತಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 14:53 IST
Last Updated 18 ಡಿಸೆಂಬರ್ 2020, 14:53 IST
ಸುಧಾ ಮೂರ್ತಿ
ಸುಧಾ ಮೂರ್ತಿ   

ಬೆಳಗಾವಿ: ‘ಆರ್ಥಿಕ ಸ್ವಾತಂತ್ರ್ಯಕ್ಕಿಂತ ಹೆಚ್ಚಾಗಿ ಶಿಕ್ಷಣದ ಮೂಲಕ ಮಹಿಳೆಯರಲ್ಲಿ ಧೈರ್ಯ ಮತ್ತು ವಿಶ್ವಾಸ ತುಂಬುವ ಕೆಲಸ ಆಗಬೇಕು’ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಹೇಳಿದರು.

ಇಲ್ಲಿನ ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಲ್ಲಿ ಮಹಿಳಾ ಅಧ್ಯಯನ ಕೇಂದ್ರವನ್ನು ಮತ್ತು ಮೂರು ದಿನಗಳ ಅಂತರರಾಷ್ಟ್ರೀಯ ವಿಚಾರಸಂಕಿರಣವನ್ನು ಆನ್‌ಲೈನ್‌ನಲ್ಲಿ ಉದ್ಘಾಟಿಸಿದ ಅವರು, ‘ಭಾರತದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ’ ಕುರಿತು ಉಪನ್ಯಾಸ ಮಾಡಿದರು.

‘ದೇಶದಲ್ಲಿ ಸ್ತ್ರೀಗೆ ದೇವತೆಯ ಸ್ಥಾನವನ್ನು ನೀಡಲಾಗಿದೆ. ಜಾಗತಿಕ ದೃಷ್ಟಿಯಲ್ಲಿ ಮಹಿಳೆ ಯಾವಾಗಲೂ ಸಾಂಸ್ಕೃತಿಕ ರಾಯಭಾರಿ ಆಗಿದ್ದಾಳೆ. ಯಶಸ್ವಿ ಜೀವನಕ್ಕಾಗಿ ಪ್ರತಿಯೊಬ್ಬ ಮಹಿಳೆಯೂ ಸ್ತ್ರೀ ಎನ್ನುವ ಅನುಕಂಪ ಆಧಾರಿತ ಅಂಶವನ್ನು ಬಳಸಬಾರದು. ಗುಂಪಿನಲ್ಲಿ ಕೆಲಸ ಮಾಡುವುದನ್ನು
ರೂಡಿಸಿಕೊಳ್ಳಬೇಕು. ಪ್ರತಿ ದಿನ ಹೊಸದನ್ನು ಕಲಿಯಬೇಕು. ಇತರರ ಅನಗತ್ಯ ವಿಷಯಗಳ ಮೇಲೆ ಸಮಯ ವ್ಯರ್ಥ ಮಾಡಬಾರದು’ ಎಂದು ಸಲಹೆ ನೀಡಿದರು.

ADVERTISEMENT

ಮೌಲ್ಯಮಾಪನ ಕುಲಸಚಿವ ಪ್ರೊ.ಸತೀಶ್ ಅಣ್ಣಿಗೇರಿ ಇದ್ದರು.

ಕುಲಸಚಿವ ಪ್ರೊ.ಎ.ಎಸ್. ದೇಶಪಾಂಡೆ ಸ್ವಾಗತಿಸಿದರು. ಕುಲಪತಿ ಪ್ರೊ.ಕರಿಸಿದ್ದಪ್ಪ ಪ್ರಾಸ್ತಾವಿಕ ಮಾತನಾಡಿದರು. ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕಿ ಡಾ.ದೀಪ್ತಿ ಶೆಟ್ಟಿ ನಿರೂಪಿಸಿದರು. ಹಣಕಾಸು ಅಧಿಕಾರಿ ಎಂ.ಎ. ಸಪ್ನಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.