ADVERTISEMENT

ಬೆಳಗಾವಿ: ₹10 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 16:04 IST
Last Updated 7 ಜೂನ್ 2025, 16:04 IST
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವೈಭವನಗರ ಬಡಾವಣೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಮಹಿಳೆಯರು ಸನ್ಮಾನಿಸಿದರು
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವೈಭವನಗರ ಬಡಾವಣೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಮಹಿಳೆಯರು ಸನ್ಮಾನಿಸಿದರು   

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಬರುವ ವೈಭವನಗರ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ₹10 ಕೋಟಿ ವೆಚ್ಚದ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಚಾಲನೆ ನೀಡಿದರು.

ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಸಚಿವೆ, ‘ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸ್ಥಳೀಯರು ಕಾಳಜಿ ವಹಿಸಬೇಕು’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ ನಾಥಬುವಾ, ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಕುಮಾರ್, ಹೆಸ್ಕಾಂ ಅಧಿಕಾರಿಗಳಾದ ಲಮಾಣಿ, ಅಶ್ವಿನ್ ಶಿಂಧೆ, ಗ್ರಾಮ ಪಂಚಾಯಿತಿ ಸದಸ್ಯರು, ವೈಭವ ನಗರದ ನಿವಾಸಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.