ಗೋಕಾಕ: ‘ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಿಸಲು ಎಲ್ಲರೂ ಸಹಕರಿಸಬೇಕು. ಭಾರತ ಇಂದು ತಂತ್ರಜ್ಞಾನ ಸೇರಿದಂತೆ ಇತರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ದೇಶದ ಸುಸ್ಥಿರ ಅಭಿವೃದ್ಧಿಗೆ ದೇಶದ ಪ್ರಜೆಗಳು ಕೈಜೋಡಿಸಬೇಕು’ ಎಂದು ತಹಶೀಲ್ದಾರ್ ಡಾ. ಮೋಹನ ಭಸ್ಮೆ ಹೇಳಿದರು
ಶುಕ್ರವಾರ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಸ್ವರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಮತ್ತು ಬಹುಮಾನ ವಿತರಿಸಲಾಯಿತು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ನರಗಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬೀಬಿಬತುಲ್ ಜಮಾದಾರ, ಡಿವೈಎಸ್ಪಿ ರವಿ ನಾಯಿಕ, ಸಿಪಿಐ ಸುರೇಶ್ ಬಾಬು , ಅಶೋಕ್ ಪೂಜಾರಿ, ಬಿ.ಇ.ಒ ಜಿ.ಬಿ.ಬಳಗಾರ, ಪ್ರಭಾರ ಪೌರಾಯುಕ್ತ ರವಿ ರಂಗಸುಭೆ, ತಾ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೆ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.