ಸತ್ತಿಗೇರಿ: ‘ನಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಗ್ರಾಮದ ಬಸ್ ನಿಲ್ದಾಣದ ಬಳಿ ₹1 ಕೋಟಿ ವೆಚ್ಚದಲ್ಲಿ ಸಿ.ಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಮೀನಾಕ್ಷಿ ಮಾಗುಂಡನ್ನವರ, ನೀಲಮ್ಮ ಭಜಂತ್ರಿ, ರಾಜು ಸೋಮನ್ನವರ, ಲಕ್ಷ್ಮಿ ನಾಗಮ್ಮನವರ, ಉಮೇಶ ಮಾಗುಂಡನ್ನವರ, ಎ.ಬಿ.ಬಂಗಾರಿ, ಬಸವರಾಜ ಆಯಟ್ಟಿ, ಗುರಪ್ಪ ಶೆಟ್ಟರ, ಶ್ರೀಕಾಂತಯ್ಯ ಮಠಪತಿ, ಕಳಸಪ್ಪ ಕಳಸನ್ನವರ, ಫಕ್ಕೀರಗೌಡ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.