ADVERTISEMENT

ಅರಭಾವಿ ಮತಕ್ಷೇತ್ರ ಮಾದರಿಯಾಗಿಸುವೆ: ಶಾಸಕ ಬಾಲಚಂದ್ರ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 15:40 IST
Last Updated 7 ಜುಲೈ 2021, 15:40 IST
ಗೋಕಾಕ ತಾಲ್ಲೂಕಿನ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ನೀಡಿದರು
ಗೋಕಾಕ ತಾಲ್ಲೂಕಿನ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ನೀಡಿದರು   

ಗೋಕಾಕ (ಬೆಳಗಾವಿ ಜಿಲ್ಲೆ): ‘ಅರಭಾವಿ ಮತಕ್ಷೇತ್ರ ಮಾದರಿಯಾಗಿಸಲು ಪಣ ತೊಟ್ಟಿದ್ದೇನೆ. ಇದಕ್ಕಾಗಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ₹ 25 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮೆಳವಂಕಿ ಗ್ರಾಮ ಪಂಚಾಯತಿ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಜನೋಪಯೋಗಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಖಂಡರು ಅಭಿವೃದ್ಧಿ ಕಾರ್ಯಗಳಿಗಾಗಿ ಒಗ್ಗಟ್ಟಾಗಿ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ. ಹೀಗೆ ಒಂದಾಗಿದ್ದರೆ ಮಾತ್ರ ಸರ್ಕಾರದ ಯೋಜನೆಗಳು ಸಾರ್ಥಕವಾಗಲು ಸಾಧ್ಯ’ ಎಂದು ತಿಳಿಸಿದರು.

ADVERTISEMENT

ಶಾಸಕರನ್ನು ಗ್ರಾಮಸ್ಥರು ಸತ್ಕರಿಸಿದರು.

ಗ್ರಾ.ಪಂ. ಅಧ್ಯಕ್ಷೆ ಯಲ್ಲವ್ವಾ ಶಿಂತ್ರಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಮುಖಂಡರಾದ ರಾಜೇಂದ್ರ ಸಣ್ಣಕ್ಕಿ, ವಿಠ್ಠಲ ಸವದತ್ತಿ, ಮಹಾದೇವ ಪತ್ತಾರ, ಸಿದ್ದಪ್ಪ ಹಂಜಿ, ಈರಪ್ಪ ಬೀರನಗಡ್ಡಿ, ಸತ್ತೆಪ್ಪ ಬಬಲಿ, ಅಲ್ಲಪ್ಪ ಕಂಕಣವಾಡಿ, ದೊಡ್ಡಪ್ಪ ಕರೆಪ್ಪನವರ, ನಾಗಪ್ಪ ಮಂಗಿ, ರಾಮಣ್ಣ ಕಾಪಸಿ, ರಮೇಶ ಬೀರನಗಡ್ಡಿ, ಅಡಿವೆಪ್ಪ ಕಂಕಾಳಿ, ಜಿ.ಪಂ. ಎಂಜಿನಿಯರಿಂಗ್‌ ಉಪವಿಭಾಗದ ಎಇಇ ಉದಯಕುಮಾರ ಕಾಂಬಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.