ADVERTISEMENT

ಯಲ್ಲಮ್ಮಗುಡ್ಡ: 3 ತಿಂಗಳಲ್ಲಿ ₹3.81 ಕೋಟಿ ಕಾಣಿಕೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 0:54 IST
Last Updated 10 ಜುಲೈ 2025, 0:54 IST
ಸವದತ್ತಿ ತಾಲ್ಲೂಕಿನ ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯಿತು
ಸವದತ್ತಿ ತಾಲ್ಲೂಕಿನ ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯಿತು   

ಉಗರಗೋಳ (ಬೆಳಗಾವಿ ಜಿಲ್ಲೆ): ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಬುಧವಾರ ಮುಗಿದಿದ್ದು, ಮೂರು ತಿಂಗಳಲ್ಲಿ ₹3.81 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.

ಇದರಲ್ಲಿ ₹ 3.39 ಕೋಟಿ ನಗದು, ₹32.94 ಲಕ್ಷ ಮೌಲ್ಯದ 340 ಗ್ರಾಂ ಚಿನ್ನಾಭರಣ ಮತ್ತು ₹ 9.79 ಲಕ್ಷ ಮೌಲ್ಯದ 8 ಕೆ.ಜಿ ಬೆಳ್ಳಿ ಆಭರಣ ಸೇರಿವೆ. 2025ರ ಏಪ್ರಿಲ್‌ 1ರಿಂದ ಜೂನ್ 30ರ ಅವಧಿಯಲ್ಲಿ ಹಾಕಿದ್ದ ಕಾಣಿಕೆಯನ್ನು ಐದು ಸುತ್ತುಗಳಲ್ಲಿ ಎಣಿಕೆ ಮಾಡಲಾಯಿತು.

‘2023ರಲ್ಲಿ ₹1.65 ಕೋಟಿ ಮತ್ತು 2024ರಲ್ಲಿ ₹1.96 ಕೋಟಿ ಕಾಣಿಕೆ ಸಂಗ್ರಹವಾಗಿತ್ತು’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.