ADVERTISEMENT

‘ಸಿ.ಎಂ ಬದಲಾವಣೆ ವಿಚಾರದ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೇನೆ’

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 2:47 IST
Last Updated 26 ಡಿಸೆಂಬರ್ 2025, 2:47 IST
ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಚಿತ್ರ.
ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಚಿತ್ರ.   

ಕಾಗವಾಡ: ‘ಸಿ.ಎಂ ಬದಲಾವಣೆ ಕುರಿತು ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಈ ವಿಚಾರದ ಬಗ್ಗೆ ಮತ್ತೊಮ್ಮೆ ಹೇಳುವ ಅಗತ್ಯವಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಗವಾಡ ತಾಲ್ಲೂಕಿನ ಕವಲಗುಡ್ಡ ಗ್ರಾಮದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ಮುಖ್ಯಮಂತ್ರಿ ಸ್ವತಃ ಅಧಿವೇಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆ ಬಗ್ಗೆ ಮತ್ತೆ ಮತ್ತೆ ಮಾತನಾಡುವ ಅಗತ್ಯ ಇಲ್ಲ. ಆದ್ದರಿಂದ ಇದರ ಬಗ್ಗೆ ನಾನು ಹೆಚ್ಚಾಗಿ ಮಾತನಾಡುವುದು ಸರಿಯಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.