
ಪ್ರಜಾವಾಣಿ ವಾರ್ತೆ
ಉಗರಗೋಳ(ಬೆಳಗಾವಿ ಜಿಲ್ಲೆ): ಯಲ್ಲಮ್ಮನಗುಡ್ಡದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ಶನಿವಾರ (ಜ.3) ನಡೆಯುವ ಜಾತ್ರೆಗೆ, ಶುಕ್ರವಾರ ಬೆಳಿಗ್ಗೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರ ದಂಡು ಹರಿದು ಬರುತ್ತಿದೆ.
ಶುಕ್ರವಾರ ರಾತ್ರಿಯಿಡೀ ಭಕ್ತರು ಹರಿದು ಬಂದು, ಶನಿವಾರ ಬೆಳಿಗ್ಗೆ ವೇಳೆಗೆ ಗುಡ್ಡದ ಪರಿಸರ ಭಕ್ತರಿಂದ ಕಿಕ್ಕಿರಿದು ತುಂಬಲಿದೆ. ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ ಮತ್ತು ಸವದತ್ತಿಯ ನೂಲಿನ ಗಿರಣಿ ಮಾರ್ಗಗಳಲ್ಲಿ ವಾಹನದಟ್ಟಣೆ ಹೆಚ್ಚಿದೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
‘ಈ ಜಾತ್ರೆಯಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಅವರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಕ್ರಮ ವಹಿಸಿದ್ದೇವೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.