ADVERTISEMENT

ಮನೆಗಳಲ್ಲೇ ಯೋಗ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 6:54 IST
Last Updated 21 ಜೂನ್ 2021, 6:54 IST
ಮನೆಯಲ್ಲೇ ಯೋಗಾಭ್ಯಾಸ ಮಾಡಿದ ಸಂಸದೆ ಮಂಗಲಾ ಅಂಗಡಿ
ಮನೆಯಲ್ಲೇ ಯೋಗಾಭ್ಯಾಸ ಮಾಡಿದ ಸಂಸದೆ ಮಂಗಲಾ ಅಂಗಡಿ    

ಬೆಳಗಾವಿ: ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ ಅಂತರರಾಷ್ಟ್ರೀಯ ಯೋಗ ದಿನವನ್ನು ಮನೆಯಲ್ಲಿ ಆಚರಿಸಲಾಯಿತು.

ಕೋವಿಡ್–19 ಕಾರಣದಿಂದಾಗಿ ಜಿಲ್ಲಾಡಳಿತದಿಂದ ಸಾರ್ವಜನಿಕ ಕಾರ್ಯಕ್ರಮ ಇರಲಿಲ್ಲ.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ, ಸಂಸದೆ ಮಂಗಲಾ ಅಂಗಡಿ, ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮನೆಯಲ್ಲೇ ಯೋಗ ಮಾಡುವ ಮೂಲಕ ಪಾಲ್ಗೊಂಡಿದ್ದರು.

ADVERTISEMENT

ಕೋವಿಡ್ ಹಿನ್ನೆಲೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಗೂ ದೃಶ್ಯ ಮಾಧ್ಯಮದಲ್ಲಿ ಅನುಸರಿಸಿಕೊಂಡು ‘ಮನೆಯಿಂದಲೇ ಯೋಗ’ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.