ADVERTISEMENT

ರಾಮದುರ್ಗ: ಯುವ ಕಾಂಗ್ರೆಸ್‌ ಕಾರ್ಯಕಾರಣಿ ಸಭೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 1:55 IST
Last Updated 14 ಜುಲೈ 2025, 1:55 IST
ರಾಮದುರ್ಗದ ಮರಾಠಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್‌ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅಶೋಕ ಪಟ್ಟಣ ಮಾತನಾಡಿದರು.
ರಾಮದುರ್ಗದ ಮರಾಠಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್‌ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅಶೋಕ ಪಟ್ಟಣ ಮಾತನಾಡಿದರು.   

ರಾಮದುರ್ಗ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜರುಗುವ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲಲು ಪ್ರತಿ ಬೂತ್‌ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಯುವಕರು ಪ್ರಮುಖ ಪಾತ್ರವಹಿಸಬೇಕಿದೆ. ಇದಕ್ಕಾಗಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ವಿಧಾನ ಸಭೆಯ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಭಾನುವಾರ ಪಟ್ಟಣದ ಮರಾಠಾ ಕಲ್ಯಾಣ ಮಂಟಪದಲ್ಲಿ ಜರುಗಿದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಯುವಕರು ಸಂಘಟಿತರಾಗಿ ರಾಜ್ಯದ ಪ್ರತಿ ಗ್ರಾಮ ಮತ್ತು ಭೂತ ಮಟ್ಟದಲ್ಲಿ ಉತ್ತಮ ಕೆಲಸ ಮಾಡಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಉನ್ನತ ಸ್ಥಾನಕ್ಕೇರಬೇಕು ಎಂದು ತಿಳಿಸಿದರು.

ರಾಜ್ಯಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಭದ್ರಬುನಾದಿ ಹಾಕಿರುವುದನ್ನು ಯುವಕರಿಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಭರವಸೆ ನೀಡಿದ್ದ ಪಂಚ ಗ್ಯಾರಂಟಿ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯ ಮಾಡಿ ಜನರ ಮನ ಗೆದ್ದಿದೆ. ಸರ್ಕಾರದ ಸಾಧನೆಗಳನ್ನು ಪ್ರತಿ ಮನೆಮನೆಗೆ ತೆರಳಿ ತಿಳಿವಳಿಕೆ ನೀಡಬೇಕು ಎಂದರು.

ADVERTISEMENT

ಪಕ್ಷದ ಸಂಘಟನೆ ಜೊತೆಗೆ ಸಮಾಜಮುಖಿ ಕಾರ್ಯ ಮಾಡಿ ಜನರ ವಿಶ್ವಾಸ ಗಳಿಸುವಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗಮನ ಹರಿಸಬೇಕು. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ಮಾಡುವ ಮುಖಾಂತರ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ತಿಳಿಸಿದರು.

ರಾಮದುರ್ಗ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಕೇತ ಪಟ್ಟಣ ಮಾತನಾಡಿ, ದೇಶದಲ್ಲಿ ಯುವ ಜನಾಂಗ ಜಾತಿ, ಧರ್ಮದ ಹೆಸರಲ್ಲಿ ಭವಿಷ್ಯ ಮರೆತು ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ದೇಶದ ಭವಿಷ್ಯವಾಗಿರುವ ಯುವ ಜನಾಂಗಕ್ಕೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಅಗತ್ಯವಿರುವ ಜಾಗೃತಿ ಮೂಡಿಸಿ ಸರಿದಾರಿಗೆ ತರಬೇಕಾದ ಅನಿವಾರ್ಯತೆ ಯುವ ಜನರ ಮೇಲಿದೆ. ಇದಕ್ಕೆಲ್ಲ ಹಿರಿಯರ ಮಾರ್ಗದರ್ಶನವೂ ಮುಖ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ ಪಾಟೀಲ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಜಿ. ಬಿ. ರಂಗನಗೌಡ್ರ, ಜಿಲ್ಲಾ ಪಂಚಾಯ್ತ ಮಾಜಿ ಉಪಾಧ್ಯಕ್ಷ ಪರಪ್ಪ ಜಂಗವಾಡ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಅಧ್ಯಕ್ಷ ಚೇತನ ದೇಸಾಯಿ, ನಗರ ಅಧ್ಯಕ್ಷ ಇನಾಯತ ಕಲಾದಗಿ, ಕೆಪಿಸಿಸಿ ಸದಸ್ಯ ಸುರೇಶ ಪತ್ತೇಪೂರ,ಜಿಪಂ ಮಾಜಿ ಸದಸ್ಯ ಜಹೂರ ಹಾಜಿ, ಸೋಮಶೇಖರ ಶಿದ್ಲಿಂಗಪ್ಪನವರ, ಮಂಜುಳಾ ದೇವರಡ್ಡಿ ಸೇರಿದಂತೆ ಅನೇಕರು ಇದ್ದರು.

ಬಸವರಾಜ ಪ್ರಧಾನಿ ಸ್ವಾಗತಿಸಿದರು. ವಿಜಯಕುಮಾರ ರಾಠೋಡ ಪ್ರಾಸ್ತಾವಿಕ ಮಾತನಾಡಿದರು. ರಾಜಶೇಖರ ತೊರಗಲ್ ಕಾರ್ಯಕ್ರಮ ನಿರೂಪಿಸಿದರು. ರಮೇಶ ಬಂಡಿವಡ್ಡರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.