ADVERTISEMENT

ಬೆಳಗಾವಿ: ಕೆರೆಯಲ್ಲಿ ಮುಳುಗಿ ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 6:41 IST
Last Updated 19 ಆಗಸ್ಟ್ 2024, 6:41 IST
<div class="paragraphs"><p>ರಿಹಾನ್‌ ಮುಗುಟಸಾಬ</p></div>

ರಿಹಾನ್‌ ಮುಗುಟಸಾಬ

   

ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಪಟ್ಟಣದ ಬಳಿ ಇರುವ ಗದ್ದಿಕೆರೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಾಲಕನ ಶವ ಪತ್ತೆಯಾಗಿದೆ.

ಎಂ.ಕೆ.ಹುಬ್ಬಳ್ಳಿಯಲ್ಲಿ 9ನೇ ತರಗತಿ ಓದುತ್ತಿದ್ದ ರಿಹಾನ್‌ ಮುಗುಟಸಾಬ ನಗಾರಸಿ (15) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಬಾಲಕ ಕೆರೆಗೆ ಈಜಲು ಹೋಗಿದ್ದ. ಮರಳಿ ಮನೆಗೆ ಬಂದಿರಲಿಲ್ಲ. ಕೆರೆ ದಡದಲ್ಲಿ ಬಾಲಕನ ಬಟ್ಟೆ ಹಾಗೂ ಚಪ್ಪಲಿ ಪತ್ತೆಯಾದವು. ಅನುಮಾನಗೊಂಡು ಸೋಮವಾರ ಕೆರೆಯಲ್ಲಿ ಹುಡುಕಾಟ ಶುರು ಮಾಡಲಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿ ಬಾಲಕನ ಶವ ಪತ್ತೆ ಮಾಡಿದರು.

ADVERTISEMENT

ಈಜಲು ಹೋದ ಬಾಲಕ ಹೇಗೆ ಮುಳುಗಿದ ಎಂಬುದು ಇನ್ನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.