ಗೋಕಾಕ: ಗೋಕಾಕ ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಕಾಲುಜಾರಿ ಕಲ್ಲು ಬಂಡೆಗಳ ನಡುವೆ ಸಿಲುಕಿದ ಪ್ರದೀಪ ಸಾಗರ ಎಂಬುವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.
ಜೇವರ್ಗಿಯ ಪ್ರದೀಪ ಸಾಗರ ಬೆಳಗಾವಿಯ ಖಾಸಗಿ ಸಂಸ್ಥೆಯ ಉದ್ಯೋಗಿ. ಶನಿವಾರ ಅವರು ಜಲಪಾತ ನೋಡಲು ಬಂದಿದ್ದರು. ಘಟನೆ ನಡೆದ ಕೂಡಲೇ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಬಂದ ಪೊಲೀಸರು ಕಾರ್ಯಾಚರಣೆ ಆರಂಭಿಸಿದರು. ಕತ್ತಲೆಯಾದ ಕಾರಣ ಭಾನುವಾರ ಆತನನ್ನು ರಕ್ಷಣೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.