ADVERTISEMENT

ಕಾಂಗ್ರೆಸ್‌ನಿಂದ ಸಂವಿಧಾನ ವಿರೋಧಿ ನಡೆ: ಝಿರಲಿ ಟೀಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 12:08 IST
Last Updated 7 ಆಗಸ್ಟ್ 2021, 12:08 IST

ಬೆಳಗಾವಿ: ‘ಪೆಗಾಸಸ್ ಗೂಢಚರ್ಯೆ ಪ್ರಕರಣದ ವಿಚಾರವಾಗಿ ಸಂಸತ್‍ನ ಮುಂಗಾರು ಅಧಿವೇಶನ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್‍ನ ನಡೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಆರೋಪಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಈ ಸಂಕಷ್ಟದ ಸಮಯದಲ್ಲಿ ಕೋವಿಡ್-19 ನಿರ್ವಹಣೆ, ಸೋಂಕಿನಿಂದ ಉದ್ಭವಿಸಿರುವ ಆರ್ಥಿಕ ಸಮಸ್ಯೆಗಳು, ಉತ್ಪಾದನಾ ಕ್ಷೇತ್ರದ ಸವಾಲುಗಳು, ಆಂತರಿಕ ಭದ್ರತೆ ಮತ್ತಿತರ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚಿಸಿ ಎಲ್ಲರೂ ಸೇರಿ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯವಿದೆ. ಆದರೆ, ಚರ್ಚೆಗಳಿಂದ ಪಲಾಯನ ಮಾಡುತ್ತಿರುವ ಕಾಂಗ್ರೆಸ್‌ನ ಧೋರಣೆಯು ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ’ ಎಂದು ಟೀಕಿಸಿದರು.

‘ಪೆಗಾಸಸ್ ಪ್ರಕರಣದ ಬಗ್ಗೆಸುಪ್ರೀಂ ಕೋರ್ಟ್‍ನಲ್ಲಿ ಕುರಿತು ವಿಚಾರಣೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್ ಹಾಗೂ ಇತರ ಕೆಲವು ವಿರೋಧ ಪಕ್ಷಗಳಿಗೆ ಕೋವಿಡ್ ಹಾಗೂ ಅದರ ಅಡ್ಡ ಪರಿಣಾಮಗಳಿಗಿಂತ ಪೆಗಾಸಸ್ ವಿಷಯವೇ ದೊಡ್ಡ ಸಮಸ್ಯೆಯಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸುತ್ತಿದ್ದ ವಿರೋಧ ಪಕ್ಷಗಳು, ಈಗ ಕೋವಿಡ್ ಪಪರಿಣಾಮಗಳ ಕುರಿತು ಚರ್ಚಿಸಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ’ ಎಂದು ಹೇಳಿದರು.

ADVERTISEMENT

ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.