ಬೆಂಗಳೂರು: ದುಷ್ಕರ್ಮಿಯೊಬ್ಬ ಅಂಗನವಾಡಿ ಕೇಂದ್ರದ ಬಳಿ ಆಟವಾಡುತ್ತಿದ್ದ ಎರಡು ವರ್ಷದ ಮಗುವನ್ನು ಅಪಹರಿಸಿರುವ ಘಟನೆ ಬೈಯಪ್ಪನಹಳ್ಳಿ ಸಮೀಪದ ನಾಗವಾರ ಮುಖ್ಯರಸ್ತೆಯಲ್ಲಿ ಬುಧವಾರ ನಡೆದಿದೆ.ಮಗುವಿನ ಪೋಷಕರು ಆಂಧ್ರಪ್ರದೇಶ ಮೂಲದವರು. ನಾಗವಾರ ಮುಖ್ಯರಸ್ತೆಯಲ್ಲಿ ವಾಸವಾಗಿದ್ದ ಅವರು, ಕೂಲಿ ಕೆಲಸ ಮಾಡುತ್ತಿದ್ದರು.
ಪ್ರತಿದಿನ ಕೆಲಸಕ್ಕೆ ಹೋಗುವಾಗ ಮಗುವನ್ನು ಸಮೀಪದ ಅಂಗನವಾಡಿಗೆ ಬಿಟ್ಟು ಹೋಗುತ್ತಿದ್ದರು. ಅಂತೆಯೇ ಬುಧವಾರ ಸಹ ಮಗುವನ್ನು ಅಂಗನವಾಡಿಗೆ ಬಿಟ್ಟು ಹೋಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮಗು ಅಂಗನವಾಡಿ ಬಳಿ ಆಟವಾಡುತ್ತಿತ್ತು. ಈ ವೇಳೆ ಅಲ್ಲಿಗೆ ಬಂದಿರುವ ಅಪರಿಚಿತ ವ್ಯಕ್ತಿಯೊಬ್ಬ ಚಾಕೊಲೇಟ್ ಕೊಡಿಸುವುದಾಗಿ ಅಕ್ಷಯ್‌ನನ್ನು ಕರೆದುಕೊಂಡು ಹೋಗಿದ್ದಾನೆ.
ಆ ವ್ಯಕ್ತಿ ತುಂಬಾ ಹೊತ್ತಾದರೂ ಬಾರದ ಹಿನ್ನೆಲೆಯಲ್ಲಿ ಗಾಬರಿಗೊಂಡ ಕೇಂದ್ರದ ಸಹಾಯಕಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಘಟನೆ ಸಂಬಂಧ ಅಪಹರಣ ಪ್ರಕರಣ ದಾಖಲಿಸಿಕೊಂಡು ಸಹಾಯಕಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೈಯಪ್ಪನಹಳ್ಳಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.