ADVERTISEMENT

ಅಂಗವಿಕಲರಿಗೆ ಸೈಕಲ್ ವಿತರಣೆ

​ಪ್ರಜಾವಾಣಿ ವಾರ್ತೆ
Published 2 ಮೇ 2012, 19:30 IST
Last Updated 2 ಮೇ 2012, 19:30 IST

ನೆಲಮಂಗಲ: `ಕರ್ನಾಟಕ ರಕ್ಷಣಾ ವೇದಿಕೆಯು ನಾಡು ನುಡಿಯ ಹೋರಾಟವಷ್ಟೇ ಅಲ್ಲದೆ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡಿದೆ ಎಂಬುದಕ್ಕೆ ಇಲ್ಲಿ ಆಯೋಜಿಸಿರುವ ಕಾರ್ಯಕ್ರಮವೇ ಸಾಕ್ಷಿ~ ಎಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಶಿವರಾಮೇಗೌಡ ತಿಳಿಸಿದರು.

ವೇದಿಕೆಯ ತಾಲ್ಲೂಕು ಘಟಕ ಪಟ್ಟಣದ ಆದಿಚುಂಚನಗಿರಿ ಐಟಿಐ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಜಾನಪದ ಉತ್ಸವದಲ್ಲಿ ಅಂಗವಿಕಲರಿಗೆ ಊರುಗೋಲು, ಮೂರು ಚಕ್ರದ ಸೈಕಲ್ ವಿತರಿಸಿ ಮಾತನಾಡಿದರು.
ವೇದಿಕೆಯ ಕಾರ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಎಂ.ಎಲ್.ಕೃಷ್ಣಪ್ಪ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಉಮೇಶ್‌ಗೌಡ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ವಕೀಲ ಎನ್.ಪಿ.ರಘುನಾಥ್, ಎನ್.ಆರ್.ಕೃಷ್ಣಮೂರ್ತಿ, ಬಿ.ಎ.ಶ್ರೀನಿವಾಸ್, ಸುರೇಶ್, ರಂಗಸ್ವಾಮಿ ವೇದಿಕೆಯಲ್ಲಿದ್ದರು.

ಸಮಾರಂಭಕ್ಕೂ ಮುನ್ನ ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಾನಪದ ಕಲೆಗಳ ಮೆರವಣಿಗೆ ನಡೆಸಲಾಯಿತು.
ಸಾಹಿತಿ ಸುಧಾ ಬರಗೂರು ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.