ADVERTISEMENT

ಅಂತರ್ಜಾಲ ವಾಣಿಜ್ಯ ಸೇವೆ ಬಳಕೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 7 ಜನವರಿ 2014, 19:48 IST
Last Updated 7 ಜನವರಿ 2014, 19:48 IST

ಬೆಂಗಳೂರು: ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಮತ್ತು ವಿಶ್ವೇಶ್ವರಯ್ಯ ಗೋಪುರದ  ಸರ್ಕಾರಿ ಕಚೇರಿಗಳಲ್ಲಿನ ಕಂಪ್ಯೂಟರ್‌ಗಳಲ್ಲಿ ಸಾಮಾಜಿಕ ಜಾಲ ತಾಣ ಮತ್ತು ಆನ್‌ಲೈನ್‌ ಶಾಪಿಂಗ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಸರ್ಕಾರಿ ನೌಕರರು ಕಚೇರಿ ಅವಧಿಯಲ್ಲಿ ಸಾಮಾಜಿಕ ಜಾಲ ತಾಣಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ ಎಂಬ ದೂರುಗಳು ಇತ್ತೀಚಿಗೆ ಕೇಳಿ ಬಂದಿದ್ದವು.
ಇದನ್ನು ಆಧರಿಸಿ ಇ – ಆಡಳಿತ ಇಲಾಖೆ ಈ ಕ್ರಮಕೈಗೊಂಡಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಇ – ಆಡಳಿತ ಇಲಾಖೆ ಈ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.