
ಪ್ರಜಾವಾಣಿ ವಾರ್ತೆಹೊಸಕೋಟೆ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡುವಂತೆ ತಾಲ್ಲೂಕು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಕೊಳತೂರು ಹನುಮಂತೇಗೌಡ ಒತ್ತಾಯಿಸಿದರು.ಗುರುವಾರ ಇಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 501ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಎನ್.ಗೋಪಾಲ ಗೌಡ ಉದ್ಘಾಟಿಸಿದರು. ಸಂಘದ ಉಪಾಧ್ಯಕ್ಷ ಲಕ್ಷ್ಮಣಗೌಡ, ಹಿರಿಯರಾದ ಟಿ.ಸೊಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಸುಜಾತಾ ಮತ್ತಿತರರು ಉಪಸ್ಥಿತರಿದ್ದರು. ಅತ್ತಿಬೆಲೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತ ಸಂಗ್ರಹಿಸಿ ಲಯನ್ಸ್ ರಕ್ತನಿಧಿಗೆ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.