
ಪ್ರಜಾವಾಣಿ ವಾರ್ತೆಬೆಂಗಳೂರು: ಸಿಂಗಪುರದ ಮೌಂಟ್ ಎಲಿಜೆಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಅವರನ್ನು ಗುರುವಾರ ವಿಶೇಷ ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ. ‘ಶ್ವಾಸಕೋಶದಲ್ಲಿನ ಸೋಂಕು ಕಡಿಮೆ ಆಗಿದ್ದು, ಅವರು ನಡೆದಾಡುವಷ್ಟು ಶಕ್ತರಾಗಿದ್ದಾರೆ’ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.