ADVERTISEMENT

ಅಂಬೇಡ್ಕರ್ ಜನ್ಮದಿನಾಚರಣೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2011, 19:30 IST
Last Updated 12 ಏಪ್ರಿಲ್ 2011, 19:30 IST

ಯಲಹಂಕ: ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾ ಮತ್ತು ಸಾಂಸ್ಕೃತಿಕ ಯುವಕರ ಹಾಗೂ ಮಹಿಳಾ ಸಂಘ ಮತ್ತು ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಕ್ಕೂರು, ಇವರ ಸಂಯುಕ್ತ ಆಶ್ರಯದಲ್ಲಿ ಜಕ್ಕೂರಿನ ದಿ.ಕೆ.ವಿ. ಭೈರೇಗೌಡ ರಂಗಮಂದಿರದಲ್ಲಿ ಗುರುವಾರ (ಏ. 14) ಮಧ್ಯಾಹ್ನ 2.30ಕ್ಕೆ ಅಂಬೇಡ್ಕರ್‌ರವರ 120ನೇ ಜನ್ಮದಿನಾಚರಣೆ  ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಶಾಸಕ ಕೃಷ್ಣಬೈರೇಗೌಡ ಸಮಾರಂಭವನ್ನು ಉದ್ಘಾಟಿಸಲಿದ್ದು, ಅಂಬೇಡ್ಕರ್ ಮತ್ತು ದಿವಂಗತ ಬಿ.ಬಸವಲಿಂಗಪ್ಪನವರ ಭಾವಚಿತ್ರವನ್ನು ವಿಧಾನ ಪರಷತ್‌ನ ವಿರೋಧ ಪಕ್ಷದ ನಾಯಕಿ ಮೋಟಮ್ಮನವರು ಅನಾವರ ಣಗೊಳಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಫರ್ ಷರೀಫ್, ಶಾಸಕ ಬಿ.ಪ್ರಸನ್ನಕುಮಾರ್ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬಡ ಮಹಿಳೆಯರಿಗೆ ಸೀರೆ, ಅಂಧಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಗುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.