ADVERTISEMENT

ಅಕ್ರಮ ಗಣಿಗಾರಿಕೆ: ‘ಕೋಕಾ’ ನ್ಯಾಯಾಲಯಕ್ಕೆ ದೂರು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2018, 19:47 IST
Last Updated 2 ಮಾರ್ಚ್ 2018, 19:47 IST

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಗಳ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಆದೇಶ ಹೊರಡಿಸುವಂತೆ ಕೋರಿ ನಗರದ ಕೋಕಾ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಲಾಗಿದೆ.

ಅಂಜನಾಪುರದ ನಿವಾಸಿ ಟಿ. ಪ್ರದೀಪ್ ಎಂಬುವರ ಪರವಾಗಿ ವಕೀಲ ಸುಧನ್ವ ದೂರು ಸಲ್ಲಿಸಿದ್ದಾರೆ. ಅದನ್ನು ಪುರಸ್ಕರಿಸಿರುವ ನ್ಯಾಯಾಲಯ, ಮಾರ್ಚ್ 5ರಂದು ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

‘ಬಿಜೆಪಿ ಮುಖಂಡ ಜನಾರ್ದನ ರೆಡ್ಡಿ, ಅವರ ಪತ್ನಿ ಅರುಣಾ ಲಕ್ಷ್ಮಿ, ಆನಂದ್ ಸಿಂಗ್‌, ಸತೀಶ್ ಸೈಲ್ ಸೇರಿದಂತೆ 25 ಮಂದಿ ಅಕ್ರಮ ಗಣಿಗಾ
ರಿಕೆಯಲ್ಲಿ  ಭಾಗಿಯಾಗಿದ್ದಾರೆ. ಅವರೆಲ್ಲರೂ ಸಂಘಟಿತರಾಗಿಯೇ ಕೃತ್ಯ ಎಸಗಿದ್ದಾರೆ. ಅವರ ವಿರುದ್ಧ ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು’ ಎಂದು ಅರ್ಜಿಯಲ್ಲಿ ಬರೆಯಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.