ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಅಕ್ರಮವಾಗಿ ಮದ್ಯ ತಯಾರಿಕೆ, ಸಾಗಾಣಿಕೆ, ಮಾರಾಟ ಹಾಗೂ ದಾಸ್ತಾನು ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿದೆ.
‘ಆನೇಕಲ್ ವಲಯ ಸೇರಿದಂತೆ, ಆಡುಗೋಡಿ, ಬಸವನಗುಡಿ, ಬಿ.ಟಿ.ಎಂ. ಲೇಔಟ್, ನಗರ ಮಾರುಕಟ್ಟೆ, ಜಯನಗರ, ಕಲಾಸಿಪಾಳ್ಯ, ಕೋರಮಂಗಲ, ಮಡಿವಾಳ, ಸಂಪಂಗಿರಾಮನಗರ, ಶಾಂತಿನಗರ ಮತ್ತು ವಿವೇಕನಗರ ನಮ್ಮ ವ್ಯಾಪ್ತಿಗೆ ಬರುತ್ತದೆ. ಈ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ನಿಯಂತ್ರಣ ಕೊಠಡಿಗೆ ಕರೆ ಮಾಡಬೇಕು’ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
24 ಗಂಟೆ ಸೇವೆ ನಿರ್ವಹಿಸುವ ದೂರವಾಣಿ ಸಂಖ್ಯೆ: 2210 3105.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.