ADVERTISEMENT

ಅಕ್ಷಯಪಾತ್ರ ಪ್ರತಿಷ್ಠಾನಕ್ಕೆ 2 ವಾಹನ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 19:47 IST
Last Updated 4 ಅಕ್ಟೋಬರ್ 2017, 19:47 IST
ಸಂಸ್ಥೆಯ ಅಧ್ಯಕ್ಷ ಜಿತು ವಿರ್ವಾನಿ (ಮೂರನೆಯವರು) ಹಾಗೂ ಅಕ್ಷಯಪಾತ್ರ ಪ್ರತಿಷ್ಠಾನದ ನಿರ್ದೇಶಕ ಮುರಳೀಧರ ಪಂಡಲಾ (ನಾಲ್ಕನೆಯವರು) ಅವರಿಗೆ ವಾಹನಗಳನ್ನು ಹಸ್ತಾಂತರಿಸಿದರು. ಆದಿತ್ಯ ವಿರ್ವಾನಿ, ಶೈನಾ ಗಣಪತಿ, ಪ್ರತಿಷ್ಠಾನದ ಪ್ರತಿನಿಧಿ ಸಬೀನಾ ಪಂಡಿತ್ ಇದ್ದಾರೆ –ಪ್ರಜಾವಾಣಿ ಚಿತ್ರ

ಬೆಂಗಳೂರು: ಎಂಬೆಸ್ಸಿ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್‌) ಎರಡು ವಾಹನಗಳನ್ನು ‘ಅಕ್ಷಯಪಾತ್ರ ಪ್ರತಿಷ್ಠಾನ’ಕ್ಕೆ ನಗರದಲ್ಲಿ ಬುಧವಾರ ಹಸ್ತಾಂತರಿಸಿತು.

ಸಂಸ್ಥೆಯ ಸಮುದಾಯ ವಿಸ್ತರಣ ಕಾರ್ಯಕ್ರಮದ ಮುಖ್ಯಸ್ಥೆ ಶೈನಾ ಗಣಪತಿ, ‘ನಮ್ಮ ಸಂಸ್ಥೆಯು ಸಮುದಾಯದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದೆ. ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕೆಳಹಂತದ ಕುಟುಂಬಗಳ ಪ್ರಗತಿಗೆ ಒತ್ತು ನೀಡುತ್ತಿದೆ’ ಎಂದರು.

ಅಕ್ಷಯಪಾತ್ರ ಪ್ರತಿಷ್ಠಾನದ ಜತೆಗೆ ಕೈಜೋಡಿಸಿರುವುದು ಖುಷಿ ತಂದಿದೆ. ಹಸ್ತಾಂತರಿಸಿದ ವಾಹನಗಳ ಮೂಲಕ ಸರ್ಕಾರಿ ಶಾಲೆಗಳ ಮಕ್ಕಳಿಗೆ ಹಾಲು ವಿತರಣೆ ಮಾಡಲಾಗುತ್ತದೆ. ಇದರಿಂದ ಒಟ್ಟು ಸುಮಾರು 13,000 ಮಕ್ಕಳಿಗೆ ಸಹಾಯವಾಗಲಿದೆ. ಪ್ರತಿಷ್ಠಾನದ ಬಿಸಿಯೂಟ ಯೋಜನೆಗೂ ಸಂಸ್ಥೆ ನೆರವು ನೀಡುತ್ತಿದೆ ಎಂದು ಹೇಳಿದರು.

ADVERTISEMENT

ನಗರದಲ್ಲಿ 17 ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಒದಗಿಸಲು ಸಂಸ್ಥೆ ಆರ್ಥಿಕ ನೆರವು ನೀಡಿದೆ. 3 ಶಾಲಾ ಕಟ್ಟಡ ನಿರ್ಮಿಸಲು ಸಹಾಯ ಮಾಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.