ADVERTISEMENT

ಅಜೀಂ ಪ್ರೇಮ್‌ಜಿ ವಿವಿ: ಅನುರಾಗ್ ಕುಲಪತಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2011, 19:30 IST
Last Updated 22 ಮಾರ್ಚ್ 2011, 19:30 IST

ಬೆಂಗಳೂರು: ನಗರದಲ್ಲಿರುವ ಅಜೀಂ ಪ್ರೇಮ್‌ಜೀ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಅನುರಾಗ್ ಬೆಹರ್ ಅವರು ನೇಮಕಗೊಂಡಿದ್ದಾರೆ. ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಅಜೀಂ ಪ್ರೇಮ್‌ಜೀ ಅವರು ಮಂಗಳವಾರ ಈ ವಿಷಯವನ್ನು ಪ್ರಕಟಿಸಿದರು.

ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ನೀಡುವಂತಹ ವೃತ್ತಿಪರತೆ ಗಳಿಸಿಕೊಳ್ಳುವುದು, ಉನ್ನತ ಜ್ಞಾನ ಗಳಿಸುವುದಕ್ಕೆ ಪೂರಕವಾದ ಕಲಿಕೆ ಹಾಗೂ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಮೂಡಿಸುವ ಮೂಲಕ ಹೊಸ ಅನ್ವೇಷಣೆ ಕೈಗೊಳ್ಳುವಂತೆ ಪ್ರೋತ್ಸಾಹಿಸುವುದು ವಿ.ವಿಯ ಉದ್ದೇಶ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT