ADVERTISEMENT

ಅಟಲ್‌ಜೀ ಜನಸ್ನೇಹಿ ಕೇಂದ್ರದ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2013, 19:54 IST
Last Updated 15 ಜುಲೈ 2013, 19:54 IST
ಯಲಹಂಕದ ತಾಲ್ಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ಸ್ಥಾಪನೆಗೊಂಡಿರುವ ಅಟಲ್‌ಜೀ ಜನಸ್ನೇಹಿ ಕೇಂದ್ರದ(ನಾಡಕಚೇರಿ)ಉದ್ಘಾಟನೆಯನ್ನು ಶಾಸಕ ಎಸ್.ಆರ್.ವಿಶ್ವನಾಥ್ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬೆಂಗಳೂರು ಉತ್ತರ(ಹೆಚ್ಚುವರಿ)ತಹಶೀಲ್ದಾರ್ ವಿ.ಪ್ರಿಯದರ್ಶಿನಿ, ದಲಿತ ಸಂಘರ್ಷ ಸಮಿತಿ(ಸಮತಾವಾದ) ರಾಜ್ಯ ಪ್ರಧಾನ ಸಂಚಾಲಕ ಎಚ್. ಮಾರಪ್ಪ ಇತರರು ಇದ್ದಾರೆ

ಯಲಹಂಕ: ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ಸ್ಥಾಪನೆಯಾಗಿರುವ ಅಟಲ್‌ಜೀ ಜನಸ್ನೇಹಿ ಕೇಂದ್ರದ(ನಾಡಕಚೇರಿ)ಉದ್ಘಾಟನೆಯನ್ನು ಶಾಸಕ ಎಸ್.ಆರ್.ವಿಶ್ವನಾಥ್ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಈ ಹಿಂದೆ ಇಲ್ಲಿಯೆ ಕಾರ್ಯನಿರ್ವಹಿಸುತ್ತಿದ್ದ ಈ ಕೇಂದ್ರವನ್ನು ಕಾರಣಾಂತರದಿಂದ ಸಿಂಗನಾಯಕನಹಳ್ಳಿಗೆ ಸ್ಥಳಾಂತರಿಸಿದ್ದ ಪರಿಣಾಮ, ಯಲಹಂಕ ಭಾಗದ ಜನರಿಗೆ ತೊಂದರೆಯಾಗಿತ್ತು. ಇಂದಿನಿಂದ ಈ ಕಚೇರಿಯು ಇಲ್ಲಿಯೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು. 

ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಿಂಚಣಿ ಯೋಜನೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಇಲ್ಲಿಯೆ ಪಡೆಯಬಹುದಾಗಿದೆ. ಇದರಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಚಾಲನೆ: ಕ್ಷೇತ್ರ ವ್ಯಾಪ್ತಿಯ ಸಿಂಗನಾಯಕನಹಳ್ಳಿ ಮತ್ತು ಬೆಟ್ಟಹಳ್ಳಿಯಲ್ಲಿ `ಅನ್ನಭಾಗ್ಯ' ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ವಿತರಣಾ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದ್ದು, ಇಡೀ ಕ್ಷೇತ್ರದಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.