
ಪ್ರಜಾವಾಣಿ ವಾರ್ತೆಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗವು ಪದವಿ ಕೋರ್ಸುಗಳ ವಿವಿಧ ವಿಷಯಗಳಲ್ಲಿ ಅರೆಕಾಲಿಕ ಮತ್ತು ಪೂರ್ಣಾವಧಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಿದೆ.
ಸಿವಿಲ್ ಎಂಜಿನಿಯರಿಂಗ್ ವಿಷಯಗಳು, ಕನ್ನಡ ಮತ್ತು ಇಂಗ್ಲಿಷ್ ಭಾಷಾ ವಿಷಯಗಳು, ಭೂಗೋಳ ಹಾಗೂ ಭಾರತೀಯ ಸಂವಿಧಾನ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವವರು ಮಾ. 10ರ ಒಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದವರನ್ನು ನಗರದ ವಿವಿಧ ಪದವಿ ಕಾಲೇಜುಗಳು ಮತ್ತು ಸಂಜೆ ಕಾಲೇಜುಗಳಿಗೆ ನಿಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ವಿಭಾಗದ ಮುಖ್ಯಸ್ಥರು, ಸಿವಿಲ್ ಎಂಜಿನಿಯರಿಂಗ್ ವಿಭಾಗ, ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ. ಸಂಪರ್ಕಕ್ಕೆ: 2296 1916.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.